ಆಳಂದ: ಪಟ್ಟಣದ ಎಸ್‌ಆರ್‌ಜಿ ಫೌಂಡೇಷನ್ ಮತ್ತು ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಶಾಲಾ ಕಾಲೇಜುಗಳಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ರಾಘವೇಂದ್ರ ಚಿಂಚನಸೂರ, ಪ್ರಜಾತಂತ್ರ ವ್ಯವಸ್ಥೆ ಬಲಗೊಳ್ಳಬೇಕಾದರೆ ಜನರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಸಂವಿಧಾನಕ್ಕೆ ಅನುಗುಣವಾಗಿ ನಡೆಯುವುದು ಮುಖ್ಯವಾಗಿದೆ ಎಂದು ಹೇಳಿದರು.
ಭಾರತೀಯ ಸಂವಿಧಾನವು ಯಾರಿಗೂ ತಾರತಮ್ಯ ಮಾಡದೇ ಎಲ್ಲರಿಗೂ ಸಮಾನ ಅವಕಾಶಗಳನ್ನು ಕೊಟ್ಟಿದೆ ಅವುಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮುಕ್ತ ಮತ್ತು ಪಾರದರ್ಶಕ ವ್ಯವಸ್ಥೆ ಇರುವುದರಿಂದಲೇ ಇವತ್ತು ಜಗತ್ತಿನಲ್ಲಿ ಭಾರತ ಗುರುತಿಸಿಕೊಳ್ಳುವಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಅಶೋಕರೆಡ್ಡಿ, ಪದವಿ ಕಾಲೇಜಿನ ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ, ಎಸ್.ಆರ್.ಜಿ ಆಂಗ್ಲ್ ಮಾಧ್ಯಮ ಶಾಲೆಯ ಮುಖ್ಯಗುರು ಜೆಎನ್‌ಎಸ್ ಕಿರಣ್ಮಯಿ ಸೇರಿದಂತೆ ಉಭಯ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.
ಸಾಲೇಗಾಂವನ ಕರಬಸಪ್ಪ ಬೆಳ್ಳೆ ಸ್ಮಾರಕ ಪ್ರೌಢಶಾಲೆಯಲ್ಲಿ ಮುಖ್ಯಗುರು ಶಶಿಕಾಂತ ಭೂಸುಣಗೆ, ತಡಕಲನ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಪ್ರೌಢಶಾಲೆಯಲ್ಲಿ ಮುಖ್ಯಗುರು ರಾಜಕುಮಾರ ಚಿಚಕೋಟಿ, ಮೋಘಾ(ಬಿ)ಯ ಎಸ್ ಎಸ್ ಧೋತ್ರೆ ಸ್ಮಾರಕ ಪ್ರೌಢಶಾಲೆಯಲ್ಲಿ ಮುಖ್ಯಗುರು ಸಿದ್ದಾರಾಮ ಧೋತ್ರೆ, ಸಕ್ಕರಗಾದ ಮಾತೋಶ್ರೀ ರಾಮವ್ವ ನಿಂಗಯ್ಯ ಗುತ್ತೇದಾರ ಪ್ರೌಢಶಾಲೆಯಲ್ಲಿ ಮುಖ್ಯಗುರು ಶರಣಬಸಪ್ಪ, ಆಳಂದನ ಮಾತೋಶ್ರೀ ಗಂಗಮ್ಮ ಮೊಗಲಯ್ಯ ಗುತ್ತೇದಾರ ಕನ್ಯಾ ಪ್ರೌಢಶಾಲೆಯಲ್ಲಿ ಮುಖ್ಯಗುರು ಮಲ್ಲಿಕಾರ್ಜುನ ಬುಕ್ಕೆ, ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಪ್ರೌಢಶಾಲೆಯಲ್ಲಿ ಮುಖ್ಯಗುರು ಕಲ್ಯಾಣಿ ತುಕಾಣೆ, ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಪ್ರಾಥಮಿಕ ಶಾಲೆಯಲ್ಲಿ ಸೂರ್ಯಕಾಂತ ಬಿರಾದಾರ, ಕಾಯಕ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಸೂರ್ಯಕಾಂತ ಧ್ವಜಾರೋಹಣ ನೇರವೆರಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…