ಬಿಸಿ ಬಿಸಿ ಸುದ್ದಿ

ಶೈಕ್ಷಣಿಕ ಸಬಲೀಕರಣಕ್ಕೆ ಅವಶ್ಯವಾದ ಅಗತ್ಯತೆ ಪೂರೈಸಿ: ಡಾ. ಅಪ್ಪಾಜೀ

ಕಲಬುರಗಿ: ಭಾರತ ದೇಶ ವೇಗವಾಗಿ ಅಭಿವೃದ್ಧಿ ಹೊಂದುವಲ್ಲಿ ಮತ್ತು ವಿಶ್ವದಲ್ಲಿ ಸೂಪರ ಶಕ್ತಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಇಂದು ನಾವೆಲ್ಲರೂ ಶೈಕ್ಷಣಿಕ ಸಬಲೀಕರಣಕ್ಕೆ ಅವಶ್ಯವಾದಂತಹ ಶೈಕ್ಷಣಿಕ ಅಗತ್ಯತೆಯನ್ನು ಸಾಧಿಸಬೇಕೆಂದು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪಾ ಅಭಿಪ್ರಾಯ ವ್ಯಕ್ತಪಡಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ೭೧ನೇ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧಿಸುವ ದೃಷ್ಟಿಯಿಂದ ಶೈಕ್ಷಣಿಕ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುವ ಜವಬ್ದಾರಿ ಹೊಂದುವದು ಅವಶ್ಯವಾಗಿದೆ. ವೇಗವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೂ ಹೆಚ್ಚು ಒತ್ತು ನೀಡಬೇಕೆಂದು ಹೇಳಿದರು.

ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ರೀತಿಯಲ್ಲಿ ಗಮನವಹಿಸಬೇಕು. ಗುಣಮಟ್ಟ ಮತ್ತು ಕೌಶಲ್ಯ ಆಧರಿತ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ರೀತಿಯಲ್ಲಿ ಹಣ ಹಂಚಿಕೆಯಾಗಬೇಕಿದೆ. ವಿದ್ಯಾವಂತ ಜನಸಂಖ್ಯೆಯಿಂದ ಮಾತ್ರವೇ ದೇಶದ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ ಎಂದರು.

????????????????????????????????????

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಜನತೆಗೆ ಅವರ ಕೈಗೆಟಕುವ ವೆಚ್ಚದಲ್ಲಿ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿಶ್ವವಿದ್ಯಾಲಯ ಮಹತ್ವದ ಪಾತ್ರ ನಿರ್ವಹಿಸುತ್ತಿವೆ.

ಶರಣಬಸವ ವಿಶ್ವವಿದ್ಯಾಲಯ ಸ್ಥಾಪಿಸುವದಕ್ಕಿಂತ ಮುಂಚೆ ವಿವಿಧ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಕೋರ್ಸಗಳನ್ನು ಆರಂಭಿಸುವ ಮೂಲಕ ಶಿಕ್ಷಣ ಸಂಸ್ಥೆಗಳ ಸರಪಳಿಗಳನ್ನು ಆರಂಭಿಸಿತು. ಈ ಮೂಲಕ ಕಲಬುರಗಿಯನ್ನು ಉತ್ತರ ಕರ್ನಾಟಕದ ಶೈಕ್ಷಣಿಕ ಕೇಂದ್ರವನ್ನಾಗಿಸಿದೆ. ಕಲಬುರಗಿ ನಗರದಲ್ಲಿ ನಾಲ್ಕು ವೈದ್ಯಕೀಯ ಕಾಲೇಜು, ದಂತ ಕಾಲೇಜು ಮತ್ತು ಎಂಜಿನೀಯರಿಂಗ ಕಾಲೇಜುಗಳಿವೆ. ಸ್ನಾತಕೋತ್ತರ ಹಾಗೂ ಪದವಿ ಪೂರ್ವ ಕಾಲೇಜುಗಳು ಇನ್ನೂ ಹೆಚ್ಚಿನ ರೀತಿಯಲ್ಲಿವೆ. ಕಲಬುರಗಿ ನಗರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಬುರಗಿ ನಗರದಲ್ಲಿ ಉಳಿದು ತಮ್ಮ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು.

ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿಯಾದ ಚಿರಂಜೀವಿ ದೊಡ್ಡಪ್ಪ ಅಪ್ಪಾಜೀಯವರು ಎನ್‌ಸಿಸಿ ಕೆಡೆಟ್ ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗೌರವಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಹಾಗೂ ಪರೀಕ್ಷೆಗಳಲ್ಲಿ ವಿಜಯ ಸಾಧಿಸಿದವರನ್ನು ಗೌರವಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬ನೇ ರ‍್ಯಾಂಕ್ ಪಡೆದ ಸಾಕ್ಷಿ
ಕೆ. ಬಿರಾದಾರ. ೮ನೇ ರ‍್ಯಾಂಕ್ ಪಡೆದ ಸ್ನೇಹಾ ಆರ್ ಪಾಟೀಲ ೯ನೇ ರ‍್ಯಾಂಕ್ ಪಡೆದ ಅಜಯ ಎಸ್ ಕುಲಕರ್ಣಿ, ೧೦ ನೇ ರ‍್ಯಾಂಕ್ ಪಡೆದ ಸುಮಿತ ಎಲ್ ಕುಲಕರ್ಣಿ ಸೇರಿದಂತೆ ಇತರ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತವು ೫೦೦೦ ರೂ ನಗದು ಬಹುಮಾನ ನೀಡಿತು. ಶರಣಬಸವೇಶ್ವರ ಸಾರ್ವಜನಿಕ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ಅತ್ಯುತ್ತಮ ನೃತ್ಯ ಪ್ರದರ್ಶಿಸುವ ಮೂಲಕ ಆಗಮಿಸಿದ್ದ ಜನಸ್ತೋಮದ ಗಮನ ಸೆಳೆದರು.

????????????????????????????????????
????????????????????????????????????
emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago