ಗಣರಾಜ್ಯೋತ್ಸವ ಸಂಭ್ರಮ: ಜಿಲ್ಲಾಧಿಕಾರಿ ಶರತ್ ಬಿ. ಅವರಿಂದ ಧ್ವಜಾರೋಹಣ

ಕಲಬುರಗಿ: ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜ.೨೬ರ ಭಾನುವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೧ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಶರತ್ ಬಿ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಿಗಮಗಳ ಮೂಲಕ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸರ್ಕಾರಿ, ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ೨೦೧೯-೨೦ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಪಶುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಪೂರ್ಣಗೊಂಡಿದೆ. ಮುಂಬರುವ ದಿನಗಳಲ್ಲಿ ಅದು ಕಾರ್ಯಾರಂಭ ಮಾಡಲಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಗಳಲ್ಲಿ ಶೇ.೭೫ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ೫೬೦ ಪ್ರೌಢ ಶಾಲೆಗಳಲ್ಲಿ ಕೆಕೆಆರ್‌ಡಿಬಿಯಿಂದ ಫಲಿತಾಂಶ ಸುಧಾರಣೆಗೆ ತೀವ್ರ ಕಲಿಕಾ ಕೇಂದ್ರ ಸ್ಥಾಪಿಸಿ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ. ಪರಿಣಾಮ ೨೦೧೮-೧೯ನೇ ಸಾಲಿನಲ್ಲಿ ಜಿಲ್ಲೆಯ ೧೬೨ ಶಾಲೆಗಳಲ್ಲಿ ಫಲಿತಾಂಶ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಮಂಡಳಿಯು ಇದಕ್ಕಾಗಿ ೯೮ ಲಕ್ಷ ರೂ. ಹಣವನ್ನು ಪ್ರಾಯೋಜನೆ ಮಾಡಿಕೊಂಡಿದೆ. ೮೫ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಮತ್ತೊಮ್ಮೆ ತಮ್ಮೇಲ್ಲರ ಸಹಕಾರ ಹಾಗೂ ಸಹಭಾಗಿತ್ವವನ್ನು ಕೋರುತ್ತಾ, ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿ ಶಕೆಯತ್ತ ಕೊಂಡೊಯ್ಯಲು ಶಿಕ್ಷಕರು, ಅಧಿಕಾರಿಗಳು, ವೈದ್ಯರು, ನಾಗರೀಕರು ಬದ್ಧತೆಯಿಂದ ದುಡಿಯೋಣ ಎಂದರು.

ಸರ್ವೋತ್ತಮ ಸೇವಾ ಪ್ರಶಸ್ತಿ: ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಗೆ ಭಾಜನರಾದವರ ವಿವರ: ಕಲಬುರಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಹಾಗೂ ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕ ಶಂಕರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಅಬ್ದುಲ್ ಅಜೀಮ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದೀಲಿಪ ಸಿಂಗ್, ಕಲಬುರಗಿ ಮಹಾನಗರ ಪಾಲಿಕೆ ಅಭಿಯಂತರ ಭೀಮಾಶಂಕರ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಸಹಾಯಕಿ ಅರ್ಚನಾ ಮಾಡ್ಯಾಳಕರ್, ಕಲಬುರಗಿ ತಹಶೀಲ್ದಾರ ಕಚೇರಿಯ ಶಿರಸ್ತೇದಾರ್ ನಾಗರತ್ನ, ಕೊಂಚಾವರಂ ಪಿಡಿಓ ತುಕ್ಕಪ್ಪ ಉರಡಿ, ಜಿಲ್ಲಾ ಪಂಚಾಯತ್ ಕಚೇರಿಯ ದ್ವಿ.ದ.ಸ. ರಾಜೇಶ್, ಅರಣ್ಯ ರಕ್ಷಕ ಬಸವಂತಪ್ಪ ಧನೋಜಿ.

ಸ್ವಾತಂತ್ರ್ಯ ಯೋಧರಾದ ಸೈಯದ್ ಖುರ್ಶೀದ್ ಅಲಿ, ವೆಂಕಟರಾವ್ ಶಿಂಧೆ, ಸಿತಾರಾಂ ಭೀಮು ನಾಯಕ, ಶ್ಯಾಮರಾವ ಕುಲಕರ್ಣಿ, ಭೀಮರಾವ ರುದ್ರವಾಡಿ, ವಿಜಯಕುಮಾರ ಪ್ರಭುರಾವ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ ಅವ್ವಣ್ಣ ಸಿದ್ರಾಮ ಪಾರಗೊಂಡ, ಶಾಂತಪ್ಪ ಶರಣಪ್ಪ, ಸಂಜೀವಕುಮಾರ ಪುಣ್ಯಶೆಟ್ಟಿ, ಚಂದ್ರಕಾಂತ ಸಿದ್ದಣ್ಣ, ಮಲ್ಲಣಗೌಡ ಶರಣಗೌಡ ಪಾಟೀಲ, ಸೋನು ಬಾಯಿ ರಾಮಚಂದ್ರ, ಚನ್ನಬಸಪ್ಪ ರಾಜೇಂದ್ರಪ್ಪ ಹಾಗರಗಿ ಅವರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ವಿಶೇಷ ಸಾಧನೆಗೈದ ಕಲಬುರಗಿ ಗ್ರಾಮೀಣ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸಂಗಪ್ಪ ಎಸ್.ಹುಲ್ಲೂರ, ಸಂದಪ್ಪ ಅವರು ಅಂಗದಾನ ಮಾಡಿದ ಹಿನ್ನೆಲೆಯಲ್ಲಿ ವಾರಸುದಾರರಾದ ಅವರ ಪತ್ನಿ ಸಾವಿತ್ರಮ್ಮ, ಪತಿ ಜಗದೇವಪ್ಪ ಅವರಿಗೆ ಅಂಗಾಂಗ ದಾನ ಮಾಡಿದ ಶಿವಮ್ಮ ಅವರಿಗೆ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಂಯುಕ್ತ ಕರ್ನಾಟಕ ಪತ್ರಿಕೆಯ ಮುಖ್ಯ ವರದಿಗಾರ ಜಯತೀರ್ಥ ಕಾಗಲಕರ್, ಸುವರ್ಣ ಟಿ.ವಿ. ವರದಿಗಾರ ಶರಣಯ್ಯ ಸ್ವಾಮಿ, ಟಿ.ವಿ.-೯ ಕ್ಯಾಮರಾಮನ್ ವಿಜಯಕುಮಾರ ವಾರದ ಹಾಗೂ ಸಂಜೆವಾಣಿ ಪತ್ರಿಕೆಯ ಛಾಯಾಗ್ರಾಹಕ ಮಹಮ್ಮದ್ ಮುಕ್ತಾರೋದ್ದಿನ್ ಜುನೈದಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸುವರ್ಣ ಹನುಮಂತ ಮಾಲಾಜಿ, ಸಂಸದರಾದ ಉಮೇಶ್ ಜಾದವ್, ಶಾಸಕರುಗಳಾದ ದತ್ತಾತ್ರೇಯ ಪಾಟೀಲ ರೇವೂರ, ಕನೀಜ್ ಫಾತೀಮಾ, ವಿಧಾನ ಪರಿಷತ್ ಶಾಸಕ ತಿಮ್ಮಣ್ಣಪ್ಪ ಕಮಕನೂರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಗಳಾದ ಸುಬೋಧ ಯಾದವ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮನೀಷ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಡಿ.ಸಿ.ಪಿ. ಕಿಶೋರ ಬಾಬು, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ. ವಾನತಿ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ. ಗೋಪಾಲಕೃಷ್ಣ ಬಿ., ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜು ಲೇಂಗಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇನ್ನಿತರ ಚುನಾಯಿತ ಪ್ರತಿನಿಧಿಗಳು ಇದ್ದರು.

ಪರೇಡ್ ಕಮಾಂಡರ್ ಆರ್.ಪಿ.ಐ. ಡಿ.ಎ.ಆರ್. ಚನ್ನಬಸಪ್ಪ ಹಾಗೂ ಸಹಾಯಕ ಪರೇಡ್ ಕಮಾಂಡ್ ಡಿ.ಎ.ಎ.ಆರ್. ಆರ್.ಎಸ್.ಐ. ಹನುಮಂತ ಅವರ ನೇತೃತ್ವದಲ್ಲಿ ಡಿ.ಎ.ಆರ್. ಕೆ.ಎಸ್.ಆರ್.ಪಿ. ಸಿವಿಲ್, ಹೋಮಗಾರ್ಡ್, ಅಗ್ನಿಶಾಮಕದಳ, ಅರಣ್ಯ, ಅಬಕಾರಿ, ಕೇಂದ್ರ ಕಾರಾಗೃಹ ಸೇರಿದಂತೆ ಒಟ್ಟು ೧೪ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಇದೇ ಸಂದರ್ಭದಲ್ಲಿ ಆರೋಗ್ಯ, ಕೃಷಿ, ತೋಟಗಾರಿಕೆ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆಗಳಿಂದ ಆಕರ್ಷಕ ಸ್ತಬ್ದ ಚಿತ್ರಗಳು ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮ ಜರುಗಿತು.

????????????????????????????????????

????????????????????????????????????
emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420