ಕಲಬುರಗಿ: ಫೆಬ್ರುವರಿ 5 ರಿಂದ 7 ರವರೆಗೆ ಜರುಗುವ 58 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾರ್ವಜನಿಕರು, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಜಿಲ್ಲಾಪಂಚಾಯತ ಹಾಗೂ ತಾಲೂಕು ಪಂಚಾಯತ್ ಸದಸ್ಯರು, ವೈದ್ಯರು, ವಕೀಲರು, ಉದ್ದಿಮೆದಾರರು ಸಹಕಾರ ನೀಡುವುದರ ಜೊತೆಗೆ ಉದಾರ ದೇಣಿಗೆ ನೀಡುವಂತೆ ಶಾಸಕರಾದ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಶಾಸಕರು ಮೂರು ದಶಕಗಳ ನಂತರ ಕಲಬುರಗಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಫೆಬ್ರುವರಿ 5 ರಿಂದ 7 ವರೆಗೆ ಜರುಗಲಿದ್ದು ಕನ್ನಡ ನುಡಿ ಜಾತ್ರೆಗೆ ಲಕ್ಷಾಂತರ ಸಾಹಿತ್ಯಾಸಕ್ತರು ಐತಿಹಾಸಿಕ ಕಲಬುರಗಿ ನಗರಕ್ಕೆ ಬರಲಿದ್ದಾರೆ. ಹಾಗೆ ಬರುವ ಪ್ರತಿಯೊಬ್ಬರಿಗೂ ಆತಿಥ್ಯ ನೀಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ನಾನು ಈ ಹಿಂದೆ ಸಮಾಜಕಲ್ಯಾಣ ಸಚಿವನಾಗಿದ್ದಾಗ 58 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲೇ ನಡೆಸಬೇಕು ಎಂದು ಒತ್ತಾಯಿಸಿ ಸಂಬಂಧಪಟ್ಟ ಬೆಂಗಳೂರಿನ ವ ಕನ್ನಡ ಸಾಹಿತ್ಯ ಪರಿಷತ್ ಗೆ ಪತ್ರ ಬರೆಯುವುದರ ಜೊತೆಗೆ ಸರಕಾರದ ಗಮನಕ್ಕೆ ತಂದಿದ್ದೆ. ಕಲಬುರಗಿ ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ಏರ್ಪಡಿಸಿದರೆ, ಈ ಭಾಗದ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ವಿಚಾರಗಳನ್ನು ಸಮ್ಮೇಳನದ ಮೂಲಕ ಹೊರ ಜಗತ್ತಿಗೆ ತಿಳಿಸುವ ಉದ್ದೇಶದಿಂದ ನಾನು ಪತ್ರಬರೆದು ಒತ್ತಾಯಿಸಿದ್ದೆ. ಪರಿಣಾಮವಾಗಿ ಈಗ ಸಮ್ಮೇಳನ ಜರುಗುತ್ತಿದೆ. ಈಗ ನಮ್ಮ ಪಕ್ಷದ ಸರಕಾರವಿಲ್ಲ. ಯಾವುದೇ ಸರಕಾರವಿರಲಿ, ನಮ್ಮ ಭಾಗದ ಹೆಮ್ಮೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವುದೇ ತೊಂದರೆಯಾಗದೇ ಅತ್ಯಂತ ಯಶಸ್ವಿಯಾಗಿ ನಡೆಸಿಕೊಡುವ ಮೂಲಕ ಕಲಬುರಗಿ ಜನರ ಆತಿಥ್ಯ ಎಂತದ್ದು ತೋರಿಸಿಕೊಡೋಣ ಎಂದು ಹೇಳಿದ್ದಾರೆ.
ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಟೊಂಕಕಟ್ಟಿ ನಿಲ್ಲಬೇಕಾಗಿದೆ. ಸರಕಾರ ಈಗಾಗಲೇ ಹಲವಾರು ಉಸ್ತುವಾರಿ ಸಮಿತಿಗಳನ್ನು ರಚಿಸಿದ್ದು ತಮ್ಮನ್ನು ವಸತಿ ಹಾಗೂ ಸಾರಿಗೆ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮ್ಮೇಳನಕ್ಕೆ ಬರುವ ಅತಿಥಿಗಳಿಗೆ ತಂಗಲು ವಸತಿ ಸೌಲಭ್ಯ ಹಾಗೂ ಭಾಗವಹಿಸಲು ನಗರಕ್ಕೆ ಬರುವ ಸಾಹಿತ್ಯಾಸಕ್ತರಿಗೆ ಸಮ್ಮೇಳನಕ್ಕೆ ಕರೆದೊಯ್ಯಲು ಸರಕಾರಿ ಸಾರಿಗೆ ಹಾಗೂ ಖಾಸಗಿ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಸಾರಿಗೆ ಸೌಲಭ್ಯ ಕೊಡಲು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೆ ವೆಚ್ಚ ಭರಿಸಬೇಕಾಗುತ್ತಿದೆ. ಹಾಗಾಗಿ, ಒಟ್ಟು ಮೂರು ದಿನದ ಸಮ್ಮೇಳನದ ಸಾರಿಗೆ ವ್ಯವಸ್ಥೆಗೆ ಕನಿಷ್ಠ ರೂ 8 ಲಕ್ಷ ವೆಚ್ಚ ಅಂದಾಜಿಸಲಾಗಿದೆ. ಈ ಮೊತ್ತವನ್ನು ಕಾಂಗ್ರೆಸ್ ಪಕ್ಷದ ಶಾಸಕರು, ಜಿಪಂ ಹಾಗೂ ತಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರಿಸಲು ತಯಾರಾಗಿದ್ದು ಹರ್ಷದ ವಿಚಾರವಾಗಿದೆ ಎಂದು ಶಾಸಕ ಖರ್ಗೆ ವಿವರಿಸಿದರು.
ಸಾರಿಗೆ ವ್ಯವಸ್ಥೆಯ ಜೊತೆಗೆ ಇತರೆ ಖರ್ಚು ವೆಚ್ಚಗಳಿದ್ದು ನಮ್ಮ ಭಾಗದ ಹೆಮ್ಮೆಯ ನಾಗರಿಕರು, ಉದ್ದೆಮಿಗಳು, ವೈದ್ಯರು, ವಕೀಲರು ಹಾಗೂ ಇತರರು ಕೈಜೋಡಿಸಿ ಉದಾರವಾಗಿ ದೇಣಿಗೆ ನೀಡುವ ಮೂಲಕ ಕನ್ನಡದ ತೇರನ್ನು ಯಶಸ್ವಿಯಾಗಿ ಎಳೆಯೋಣ. ಈ ಕೈಂಕರ್ಯದಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡೋಣ ಇದಕ್ಕೆ ನೀವೆಲ್ಲ ಭಾಗಿಯಾಗಬೇಕು ಮತ್ತು ದೇಣಿಗೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಗಣರಾಜ್ಯೋತ್ಸವದ ದಿನದಂದು ಚಿತ್ತಾಪುರದಲ್ಲಿ ನಡೆದ ಸಮಾರಂಭದಲ್ಲಿ ತಾವು ವೈಯಕ್ತಿಕ ದೇಣಿಗೆ ನೀಡುವ ಮೂಲಕ ಈ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ಶಾಸಕ ವಿವರಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…