ಬಿಸಿ ಬಿಸಿ ಸುದ್ದಿ

ಪುಸ್ತಕ ಸಂಸ್ಕೃತಿ ಬೆಳೆಸಿಕೊಳ್ಳಿ: ಸಚಿವ ಸುರೇಶ್ ಕುಮಾರ ಸಲಹೆ

ಕಲಬುರಗಿ: ಇಡೀ ಕರ್ನಾಟಕ ಹೆಮ್ಮೆ ಪಡುವ  ಕಾರ್ಯಕ್ರಮವಿದು. ಈ ಭಾಗಕ್ಕೆ ಅಗತ್ಯವಾದ ಸಾಹಸವನ್ನು ಬಸವರಾಜ ಕೊನೇಕ್ ಮಾಡುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಮತ್ತು ಸಕಾಲ ಸಚಿವ ಸುರೇಶ ಕುಮಾರ ಹೇಳಿದರು.
ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಮತ್ತು ಬಸವ ಪ್ರಕಾಶನದ ೪೩ನೇ ವಾರ್ಷಿಕೋತ್ಸವ ಹಾಗೂ ಹಾಗೂ ೧೦೧ ಪುಸ್ತಕಗಳ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ದೇಶ ಸುತ್ತುವುದು ಹೆಚ್ಚಾಗುತ್ತಿದೆ. ಕೋಶ ಓದುವುದು ಕಮ್ಮಿಯಾಗುತ್ತಿದೆ. ಪುಸ್ತಕಗಳನ್ನು ಹೆಚ್ಚು ಓದಬೇಕು. ಅಂದಾಗ ಮಾತ್ರ ಪರಿಶ್ರಮ ಯಶಸ್ವಿಯಾಗಲು ಸಾಧ್ಯ. ಮೊಬೈಲ್ ಯುಗದಲ್ಲಿ ಪುಸ್ತಕ ಓದುವ ಸಂಸ್ಕೃತಿ ತರಬೇಕಾಗಿದೆ. ಸಿದ್ಧಲಿಂಗೇಶ್ವರ ಪ್ರಕಾಶನ ಸಂಸ್ಥೆ ಕಲ್ಯಾಣ ಕರ್ನಾಟಕದಲ್ಲಿ ಮಹತ್ವದ ಕಾರ್ಯ ಮಾಡಿದೆ ಎಂದು ತಿಳಿಸಿದರು.
ಹಿರಿಯ ಸಾಹಿತಿ ರಾಘವೇಂದ್ರ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಆಧುನಿಕತೆಯ ಈ ಕಾಲದಲ್ಲಿ ಇಂದೆಂದಿಗಿಂತಲೂ ಪುಸ್ತಕಗಳಿಗೆ ಬಹಳ ಮಹತ್ವವಿದೆ.  ಆಧುನಿಕತೆ ಮೂರು ಪರಿಣಾಮಗಳನ್ನು ತಂದೊಡ್ಡಿದೆ. ಮನುಷ್ಯನನ್ನು ಅವನ ಜವಾಬ್ದಾರಿಯಿಂದ ಬಿಡುಗಡೆ ಮಾಡುತ್ತಿದೆ, ಮಾತೃ ಮೌಲ್ಯ ಕಡಿಮೆ, ಸಂವೇದನೆಗಳನ್ನು ಜಡಗೊಳಿಸುತ್ತದೆ ಎಂದು ಹೇಳಿದರು.
ಈ ಎಲ್ಲ ವೇಗದ ಬದಲಾವಣೆಗಳಿಂದ ವ್ಯವಧಾನದ ಅನುಭವ ಪಡೆದುಕೊಳ್ಳುವುದು ಕಡಿಮೆಯಾಗಿದೆ.  ಸಂವೇದನೆಗಳು ಸತ್ತು ಹೋಗಿವೆ. ಈ ಉಪಕ್ರಮಗಳಿಂದ ಬಿಡುಗಡೆಗೊಂಡು ಮತ್ತೆ ಮನಷ್ಯತ್ವ ಜಾಗ್ರಗೊಳಿಸಿಕೊಳ್ಳಬೇಕು ಎಂದರು. ಸಾಹಿತ್ಯ ಮತ್ತು ಸಂಗೀತಕ್ಕೆ ಅಂತಃಕರಣ ಕರಗಿಸುವ ಶಕ್ತಿಯಿದೆ.‌ ಮಾನವ ಕುಲದ ರಕ್ಷಣೆಯ ಸಾಧನವಾಗಿ ಬಳಸಿದಾಗ ಮನುಷ್ಯ ಪುನಃ ಮನುಷ್ಯನಾಗಲು ಸಾಧ್ಯ ಎಂದು ಅವರು ತಿಳಿಸಿದರು.
ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶಕುಮಾರ ಹೊಸಮನಿ, ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಮುಖ್ಯ ಅತಿಥಿಗಳಾಗಿದ್ದರು. ಸೊನ್ನ ವಿರಕ್ತಮಠದ ಡಾ. ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಸವರಾಜ ಕೊನೇಕ್, ಸಿದ್ಧಲಿಂಗ ಬ. ಕೊನೇಕ್, ಶರಣಬಸವ ಬ.ಕೊನೇಕ್  ಇತರರಿದ್ದರು. ಶಿವರಾಜ ಪಾಟೀಲ ನಿರೂಪಿಸಿ ಪ್ರಾಸ್ತಾವಿಕ ಮಾತನಾಡಿದರು. ಡಾ. ಗವಿಸಿದ್ಧ ಪಾಟೀಲ ಸ್ವಾಗತಿಸಿದರು.
emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

7 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

18 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

18 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

20 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

20 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

20 hours ago