ಬಿಸಿ ಬಿಸಿ ಸುದ್ದಿ

ಸಾಹಿತ್ಯ ಸಮ್ಮೇಳನ; ಜಿ.ಪಂ. ಅಧ್ಯಕ್ಷರಿಂದ ಗೋಡೆ ಬರಹ ಕಾರ್ಯ ವೀಕ್ಷಣೆ

ಕಲಬುರಗಿ: ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸೂಫಿ-ಸಂತರ ನಾಡು ಕಲಬುರಗಿಯಲ್ಲಿ ನಗರ ಸೌಂದರ್ಯೀಕರಣ ಕಾರ್ಯಗಳು ಮತ್ತು ವಿದ್ಯುತ್ ಕಂಬಗಳಿಗೆ ಸಾಹಿತ್ಯ ಸಮ್ಮೇಳನದ ಮಾಹಿತಿವುಳ್ಳ ಪೋಲ್ ಬೋರ್ಡ್ ಅಳವಡಿಕೆ ಕಾರ್ಯ ಭರದಿಂದ ಸಾಗಿದೆ.

ರವಿವಾರ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ವರೆಗೆ ವಿದ್ಯುತ್ ಕಂಬಕ್ಕೆ ಅಲಂಕಾರ ಸಮಿತಿಯಿಂದ ಪೋಲ್ ಬೋರ್ಡ್‌ಗಳ ಅಳವಡಿಕೆ ಕಾರ್ಯ ನಿರಂತರ ಸಾಗಿತ್ತು.
ಇದಲ್ಲದೆ ರಸ್ತೆ ವಿಭಜಕಗಳಿಗೆ ಸುಣ್ಣ ಬಣ್ಣ ಹಚ್ಚುವ ಕೆಲಸ, ರಸ್ತೆ ಬದಿ ಗೋಡೆಗಳ ಮೇಲೆ ಚಿತ್ರ ಬಿಡಿಸುವ ಮತ್ತು ನುಡಿ ಸಮ್ಮೇಳನಕ್ಕೆ ಆಗಮಿಸುವ ಬರಹಗಳು ಎಲ್ಲೆಡೆ ಬರೆಯಲಾಗುತ್ತಿದೆ.

ನುಡಿ ಸಮ್ಮೇಳಕ್ಕೆ ಇನ್ನೇನೂ ಒಂದು ವಾರ ಬಾಕಿ ಇರುವ ಹಿನ್ನೆಲೆಯಲ್ಲಿ ನಗರವನ್ನು ಮದುವಣಗಿತ್ತಿಯಂತೆ ಸಿಂಗರಿಸಲು ಎಲ್ಲಾ ಸಮಿತಿಗಳು ಯುದ್ದೋಪಾದಿಯಲ್ಲಿ ತಮ್ಮ ಕೆಲಸಗಳನ್ನು ಆರಂಭಿಸಿವೆ. ಈ ಮಧ್ಯೆ ರವಿವಾರ ಅಲಂಕಾರ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ ಅವರು ಗೋಡೆ ಬರಹ ಮತ್ತು ಪೋಲ್ ಬೋರ್ಡ್ ಅಳವಡಿಕೆ ಕಾರ್ಯ ವೀಕ್ಷಿಸಿದರು.

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

7 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago