ಕಲಬುರಗಿ: ಶಹಾಬಾದ ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ರವಿವಾರ ನಡೆದ ೭೧ ಗಣರಾಜ್ಯೋತ್ಸವದ ದಿನಾಚರಣೆ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ ಅವರು ಸಾಹಿತ್ಯ ಸಮ್ಮೇಳನದ ಪ್ರಚಾರ ಸಮಿತಿಯಿಂದ ಸಿದ್ಧಪಡಿಸಲಾದ ಪೋಸ್ಟರ್ ಮತ್ತು ವಾಹನಗಳ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದರು.
ಮೂರು ದಶಕಗಳ ನಂತರ ತೊಗರಿ ನಾಡು ಕಲಬುರಗಿಯಲ್ಲಿ ಕನ್ನಡದ ಮೇರು ಹಬ್ಬ ಅಕ್ಷರ ಜಾತ್ರೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಹೀಗಾಗಿ ಗ್ರಾಮೀಣ ಕ್ಷೇತ್ರದ ಸಾರ್ವಜನಿಕರು, ಶಾಲಾ ಮಕ್ಕಳು, ಶಿಕ್ಷಕರು ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ನುಡಿ ಜಾತ್ರೆಗೆ ಅಗಮಿಸುವ ಮೂಲಕ ದಶಕಗಳ ಕಾಲ ನೆನಪಿನಂಗಳದಲ್ಲಿ ಉಳಿಯುವಂತೆ ಐತಿಹಾಸಿಕ ಸಮ್ಮೇಳನವಾಗಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸುರೇಶ ಶರ್ಮಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ಲಕ್ಷ್ಮಣ್ ಶೃಂಗೇರಿ, ನಗರಸಭೆ ಪೌರಾಯುಕ್ತ ವೆಂಕಟೇಶ, ನಗರಸಭೆ ಸದಸ್ಯರಾದ ಡಾ.ಅಹ್ಮದ್ ಪಟೇಲ್, ಸುರೇಶ್ ಕೋಬಾಳ, ಮಹಮ್ಮದ್ ಜುಬೇರ, ಸಾಹೇಬಗೌಡ ಬೊಗುಂಡಿ, ಡಿವೈ.ಎಸ್ ಪಿ ವೆಂಕಣಗೌಡ ಪಾಟೀಲ್, ಶಹಾಬಾದ ತಾಲೂಕು ಕಸಾಪ ಅಧ್ಯಕ್ಷ ಮೃತ್ಯುಂಜಯ ಹಿರೇಮಠ, ಕಲಬುರಗಿ ಗ್ರಾಮೀಣ ಕ್ಷೇತ್ರದ ಕನ್ನಡ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷ ಶರಣಗೌಡ ಪಾಟೀಲ್, ಶಹಾಬಾದ ವಲಯ ಕ.ಸಾ.ಪ. ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಗಣ್ಯರಾದ ಅಣ್ಣವೀರಪ್ಪ ಇಂಗಿನಶೆಟ್ಟಿ, ಉದ್ದಿಮೆದಾರರಾದ ಅಪ್ಪರಾವ ನಾಗಶೆಟ್ಟಿ, ಅಣ್ಣಪ್ಪಾ ದಸ್ತಾಪೂರ, ಮುಖಂಡರಾದ ನಾಗರಾಜ ಮೇಲಗಿರಿ, ಕಸಾಪ ಪದಾಧಿಕಾರಿಗಳಾದ ರವಿ ಬೆಳಮಗಿ ಸಂತೋ? ದೊಡ್ಡಮನಿ,ಧನವಂತ ಮುದಿಗೌಡ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…