ಕಲಬುರಗಿ: ಶರಣ ಸೋಮಶೇಖರ ಚಿನಮಳ್ಳಿ ಬರೆದ ಲಿಂಗ ಸಂದೇಶ ಗ್ರಂಥ ಜನಾರ್ಪಣೆ ಹಾಗೂ ಶರಣ ಸಂಗಮ ಕಾರ್ಯಕ್ರಮ ಮೇ 11ರಂದು ಬೆಳಗ್ಗೆ 10 ಗಂಟೆಗೆ ನಗರದ ಅಪ್ಪ ಗಾರ್ಡನ್ ಪಕ್ಕದ ಜನತಾ ಲೇಔಟ್ ನ ಸಿದ್ಧಾರೂಢ ಮಠದ ಬಳಿ ಇರುವ ಹೋಟೆಲ್ ಪೂರ್ಣಾನಂದ ಪ್ಯಾರಡೈಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಚಂದ್ರಶೇಖರ ಮುಗಳಿ ತಿಳಿಸಿದ್ದಾರೆ.
ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ತಾಯಿ ಅಧ್ಯಕ್ಷತೆ ವಹಿಸಲಿದ್ದು, ಹೈ.ಕ. ಶಿಕ್ಷಣ ಸಂಸ್ಥೆ ಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಉಪಾಧ್ಯಕ್ಷ ಶಿವಾನಂದ ದೇವರಮನಿ, ಡಾ. ಸಾಯಿನಾಥ ಆಂದೋಲಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಗ್ರಂಥ ಕುರಿತು ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪ್ರೊ. ಕುಪೇಂದ್ರ ಪಾಟೀಲ ಮಾತನಾಡಲಿದ್ದು, ಮಹಾಂತೇಶ ಕುಂಬಾರ ಅವರು, ಇಷ್ಟಲಿಂಗ- ಸ್ಥಾವರ ಲಿಂಗ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅನಿಲಕುಮಾರ ಚಿನಮಳ್ಳಿ ಸ್ವಾಗತ, ಡಾ. ಕರಣಕುಮಾರ ಚಿನಮಳ್ಳಿ ಶರಣು ಸಮರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಶರಣ ಸಂಗಮ ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಶಿವಶರಣರಪ್ಪ ಕಲಬುರಗಿ ವಹಿಸಲಿದ್ದು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶರಣ ರವೀಂದ್ರ ಶಾಬಾದಿ ಅತಿಥಿಯಾಗಿ ಆಗಮಿಸಲಿದ್ದು, ಸಂತೋಷ ಹೂಗಾರ ಅವರು ಶರಣರ ದಾಂಪತ್ಯ ಜೀವನ ಕುರಿತು ವಿಶೇಷ ಅನುಭಾವ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…