ಸುರಪುರ: ಇಂದು ಸರಕಾರ ಜನರಿಗಾಗಿ ಉದ್ಯೋಗ ಖಾತರಿ ಯೋಜನೆ ಜಾರಿಗೊಳಿಸಿ ಗ್ರಾಮೀಣ ಪ್ರದೇಶದ ಎಲ್ಲರಿಗೂ ದುಡಿಯಲು ಉದ್ಯೋಗ ನೀಡಲಾಗುತ್ತಿದೆ.ಆದ್ದರಿಂದ ತಾವ್ಯಾರು ಬೇರೆ ಕಡೆಗೆ ಕೆಲಸ ಅರಸಿ ಗುಳೆ ಹೋಗದೆ ತಮ್ಮ ತಮ್ಮ ಊರುಗಳಲ್ಲಿಯೇ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ತಿಳಿಸಿದರು.
ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಜಿಲ್ಲಾ ಹಾಗು ತಾಲೂಕು ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿ,ಉದ್ಯೋಗ ಖಾತ್ರಿ ಯೋಜನೆಯಡಿ ಇದುವರೆಗೆ ೧೦೦ ದಿನಗಳ ಉದ್ಯೋಗ ನೀಡಲಾಗುತ್ತಿತ್ತು,ಆದರೆ ಈಗ ಬರಗಾಲದ ಕಾರಣದಿಂದ ೧೫೦ ದಿನಗಳ ವರೆಗೆ ಉದ್ಯೋಗ ನೀಡಲಾಗುತ್ತದೆ.ಗಂಡು ಮತ್ತು ಹೆಣ್ಣಿಗೆ ನಿತ್ಯವು ೨೪೯ ರೂಪಾಯಿಗಳ ಕೂಲಿ ನೀಡಲಾಗುತ್ತದೆ.ಕೆಲಸ ಮಾಡಿದ ೧೫ ದಿನದೊಳಗೆ ನಿಮ್ಮ ಖಾತೆಗೆ ಹಣ ಹಾಕಲಾಗುತ್ತದೆ.ಅಲ್ಲದೆ ನೀವು ವಾಸವಾಗಿರುವ ಸ್ಥಳದಿಂದ ೫ ಕಿಲೋ ಮೀಟರ್‌ಗಿಂತ ಹೆಚ್ಚಿನ ದೂರದಲ್ಲಿ ಕೆಲಸ ಮಾಡಿದರೆ ಹೆಚ್ಚುವರಿಯಾಗಿ ಶೇ ೧೦ ರಷ್ಟು ಹಣವನ್ನು ಸಾರಿಗೆ ಮತ್ತು ಜೀವನ ವೆಚ್ಚಕ್ಕಾಗಿ ನೀಡಲಾಗುತ್ತದೆ.
ವಿಶೇಷ ತೇತನರು ಹಾಗು ವೃಧ್ಧರಿಗಾಗಿ ಕೆಲಸದಲ್ಲಿ ಶೇ ೫೦ ರೀಯಾಯಿತಿ ನೀಡಲಾಗುತ್ತದೆ.ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗು ಬುಡಕಟ್ಟು ಜನಾಂಗ,ಬಿಪಿಎಲ್ ಕುಟುಂಬ,ಮಹಿಳಾ ಪ್ರಧಾನ ಕುಟುಂಬ ಸೇರಿದಂತೆ ವಿವಿಧ ಯೋಜನೆಗೆ ಅರ್ಹ ಫಲಾನುಭವಿ ಕುಟುಂಬಗಳಿಗೆ ವ್ಯಕ್ತಿಗತ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ.ಆದ್ದರಿಂದ ತಾವೆಲ್ಲರು ಗುಳೆ ಹೋಗುವುದನ್ನು ಬಿಟ್ಟು ತಮ್ಮ ಗ್ರಾಮಗಳಲ್ಲಿಯೆ ಉದ್ಯೋಗ ಖಾತರಿ ಯೋಜನೆಯ ದುಡಿಯುವ ಕೈಗಳಿಗೆ ಕೂಲಿ ಖಾತರಿಯಡಿ ಕೆಲಸ ನಿರ್ವಹಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ವಿಶ್ವನಾಥ,ಐ.ಸಿ ಸಂಪನ್ಮೂಲ ಅಧಿಕಾರಿ ಅನಿಲ,ಹಣಮಂತ ಬಡಿಗೇರ,ವೆಂಕನಗೌಡ,ಈಶ್ವರ ಕಟ್ಟಿಮನಿ ಸೇರಿದಂತೆ ಅನೇಕ ಜನ ಕೂಲಿಕಾರರು ಹಾಗು ಸಾರ್ವಜನಿಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…