ವರದಿ: ಮೋಹನ ಮದ್ದೂರ
ಮಂಡ್ಯ: ಕೃಷ್ಣರಾಜಪೇಟೆ ಪಟ್ಟಣದ ಟಿಬಿ ಬಡಾವಣೆಯ ದಕ್ಷಿಣ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 105ನೇ ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಸಾಪ ಮಾಜಿ ಅಧ್ಯಕ್ಷ ಸಾಹಿತಿ ಸುಜನಾ ಅವರ ಸಹೋದರ ಡಾ.ಶ್ರೀನಿವಾಸ ಶೆಟ್ಟಿ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಮನೆ ಹಾಗೂ ಮನದಲ್ಲಿ ಕನ್ನಡದ ಕಿಚ್ಚನ್ನು ಹಚ್ಚುವ, ಕನ್ನಡದ ಬಗ್ಗೆ ಅಭಿಮಾನವನ್ನು ಮೂಡಿಸುವ ಕೆಲಸವನ್ನು ಬದ್ಧತೆಯಿಂದ ಮಾಡುತ್ತಿದೆ. ಕನ್ನಡ ನಾಡು ನುಡಿ, ನೆಲ-ಜಲದ ಉಳಿವಿಗಾಗಿ ಹೋರಾಡಿದ ಮಹನೀಯರ ಆದರ್ಶಗಳು ಹಾಗೂ ಬಲಿದಾನವನ್ನು ಸ್ಮರಿಸಿ ನಮ್ಮ ಮುಂದಿನ ತಲೆಮಾರಿಗೆ ತಿಳಿಸಿಕೊಡಲು ಇಂತಹ ಕಾರ್ಯಕ್ರಮಗಳು ವರದಾನವಾಗಿವೆ ಎಂದು ಶ್ರೀನಿವಾಸ ಶೆಟ್ಟಿ ಹೇಳಿದರು.
ಕಸಾಪ ಸಂಸ್ಥಾಪನಾ ದಿನಾಚರಣೆ ಕುರಿತು ಕನ್ನಡ ಅಧ್ಯಾಪಕ ಚಾ.ಶಿ.ಜಯಕುಮಾರ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಕನ್ನಡದ ಪರಿಚಾರಕರಾದ ಕೆ.ಜೆ.ನಾಗರಾಜು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.. ಶಿಕ್ಷಣ ಇಲಾಖಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯೋಗೇಶ್, ಗೌರವಾಧ್ಯಕ್ಷ ಕೃಷ್ಣನಾಯಕ್, ನಿರ್ದೇಶಕರಾದ ನಾಗೇಶ್, ಶಿವಕುಮಾರ್, ಕಸಾಪ ನಗರ ಘಟಕದ ಅಧ್ಯಕ್ಷ ಪಿಕೆಜಿ ಮಹೇಶ್, ಕಸಾಪ ಹೋಬಳಿ ಘಟಕದ ಅಧ್ಯಕ್ಷ ವಸಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…