ಬಿಸಿ ಬಿಸಿ ಸುದ್ದಿ

ಸುರಪುರದಲ್ಲಿ ರಾಜ್ಯ ಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಟೂರ್ನಿ

ಸುರಪುರ: ಸ್ಥಳಿಯ ಕಾಂಗ್ರೇಸ್ ಪಕ್ಷದ ಯುವ ಮುಖಂಡರಾಗಿದ್ದ ದಿ|| ಶ್ರೀ ರಾಜಾ ಶ್ರೀರಾಮನಾಯಕ ರವರ ಸ್ಮರ್ಣಾರ್ಥವಾಗಿ ದಿನಾಂಕ: ೦೮-೦೨-೨೦೨೦ ರಂದ ನಗರದ ಶ್ರೀ ಪ್ರಭು ಮಹಾ ವಿದ್ಯಾಲಯದ ಮೈದಾನದಲ್ಲಿ ರಾಜ್ಯ ಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜಾ ಮೌನೇಶ್ವರ ನಾಯಕ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಆರ್.ಕೆ.ಎನ್ ಕ್ರಿಕೆಟ್ ಕ್ಲಬ್‌ನಿಂದ ಪ್ರತಿವರ್ಷ ಈ ಟೂರ್ನಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು,ಈ ವರ್ಷವೂ ನಡೆಸಲಾಗುತ್ತಿದೆ. ಈಗಾಗಲೆ ಕ್ರೀಡಾಕೂಟದ ನೊಂದಣಿ ಕಾರ್ಯ ಆರಂಭವಾಗಿದ್ದು ದಿನಾಂಕ ೦೫-೦೨-೨೦೨೦ ತಂಡಗಳ ಹೆಸರು ನೊಂದಣಿಗೆ ಕೊನೆಯ ದಿನವಾಗಿದೆ.

ಟೂರ್ನಿಯ ಪ್ರಥಮ ಬಹುಮಾನ ೧.೫೦ ಲಕ್ಷ ರೂಪಾಯಿಗಳು ಹಾಗು ಒಂದು ಟ್ರೋಫಿ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಇವರಿಂದ ಹಾಗೂ ದ್ವಿತಿಯ ಬಹುಮಾನ ೭೫ ಸಾವಿರ ರೂಪಾಯಿಗಳು ಒಂದು ಟ್ರೋಫಿ ವಿಠ್ಠಲ ವಿ ಯಾದವ ರಾಜ್ಯ ಅಪೆಕ್ಸ್ ಬ್ಯಾಂಕ ನಿರ್ದೇಶಕರು ಹಾಗೂ ವೆಂಕೋಬ ಯಾದವ ಪ್ರಥಮ ದರ್ಜೆ ಗುತ್ತಿಗೆದಾರರು ಇವರುಗಳಿಂದ ನೀಡಲಾಗುತ್ತಿದೆ.ಇದರ ಜೊತೆಗೆ ಇನ್ನೂ ಅನೇಕ ವೈಯಕ್ತಿಕವಾದ ಬಹುಮಾನಗಳನ್ನು ನೀಡಲಾಗುತ್ತಿದ್ದು, ಪಂದ್ಯಾವಳಿಗಳಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗಾಗಿ ಸಂಪತ್(ಚೀನಿ ಮರೆಪ್ಪ):೯೪೪೮೫೨೨೨೨೨, ವೆಂಕಟೇಶ ಸೂರ್ಯವಂಶಿ: ೯೭೩೧೬೩೪೪೮೫೬, ಸಂಕೇತ ಬುಕ್‌ಸ್ಟಾಲ್:೮೮೬೧೪೮೭೯೪೭, ವೆಂಕಟೇಶ ಸ್ಪೊರ್ಟಸ್ ಗ್ಯಾಲರಿ: ೯೮೪೫೭೭೯೧೪೩ ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಜಕ ಮಂಡಳಿ ವತಿಯಿಂದ ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago