ಸುರಪುರ: ಭಾರತ ಜಗತ್ತಿನಲ್ಲಿಯೆ ಅತಿ ದೊಡ್ಡ ಸಂವಿಧಾನವನ್ನು ಹೊಂದಿದ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ.ಪ್ರಜಾಪ್ರಭುತ್ವದ ಆಶಯವಾದ ಚುನಾವಣಾ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವುದು ಅವಶ್ಯವಾಗಿದೆ ಎಂದು ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಪ್ರೊ. ವೇಣುಗೋಪಾಲ ಜೇವರ್ಗಿಯವರು ಮಾತನಾಡಿದರು.
ನಗರದ ಶ್ರೀಪ್ರಭು ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ .ಮತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,ಹದಿನೆಂಟು ವರ್ಷ ತುಂಬಿದ ಎಲ್ಲರು ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ಡಾ. ಎಸ್.ಎಚ್. ಹೊಸಮನಿಯವರು ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಬೇಕಾದರೆ ಎಲ್ಲರೂ ಮತದಾನದ ಪ್ರಕ್ರೀಯೆಯಲ್ಲಿ ಭಾಗವಹಿಸಬೇಕು ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಪ್ರೊ. ಎಮ್.ಡಿ. ವಾರಿಸ್ ಮತ್ತು ನಗರಸಭೆಯ ಇಂಜಿನಿಯರಗಳಾದ ಮಹೇಶ, ಸಲ್ಮಾನ ,ಡಾ. ಶರಣಗೌಡ ಪಾಟಿಲ್, ಎಸ್.ಎಮ್. ಸಜ್ಜನ, ಡಾ. ರಮೇಶ ಶಹಾಪುರಕರ್, ಹಂಪಮ್ಮ ಶ್ರೀಶೈಲ್ ಕೊಲಕುಂದಿ, ಸನಾ, ವೀರಣ್ಣ ಜಾಕಾ, ಯಲ್ಲಪ್ಪ ಜಾಗಿರದಾರ ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಅಧಿಕಾರಿ ಡಾ. ಸಾಯಿಬಣ್ಣ ಮುಡಬೂಳ ಮತದಾನದ ದಿನಾಚಾರಣೆಯ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.ಡಾ. ಸುರೇಶ ಮಾಮಡಿ ನಿರೂಪಿಸಿದರು, ಸಂತೋಷ ಹೆಡಗಿನಾಳ. ಸ್ವಾಗತಿಸದರು, ನಿಲಾಂಬಿಕಾ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…