ಕಲಬುರಗಿ: ನಗರದ ಜಿಲಾನಾಬಾದ್‌ನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಮದಿನಾ ಕಾಲೋನಿಯ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯ ಅನಂತರಾವ ಕುಲಕರ್ಣಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ನಿಯರು ಅಭ್ಯಾಸಕ್ಕೆ ಹೆಚ್ಚಿನ ಗಮನಕೊಡುವುದರ ಜೊತೆಗೆ ಹೆಣ್ಣು ಮಕ್ಕಳು ಉನ್ನತ ಮಟ್ಟದ ಶಿಕ್ಷಣದ ಜೊತೆಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಔದ್ಯೋಗಿಕ ಕ್ಷೇತ್ರದಲ್ಲಿ ಸಾಧನೆ ಮಾಡವುದವರ ಜೊತೆಗೆ ಆದರ್ಶ ಕುಟುಂಬ ಮತ್ತು ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಸಾಧನೆಯ ಜೊತೆಗೆ ಸರ್ಕಾರಿ ನೌಕರಿ ಪಡೆದುಕೊಳ್ಳಬೇಕಾದರೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಕಟ್ಟಿಟ್ಟಬುತ್ತಿ.ಆದ್ದರಿಂದ ವಿದ್ಯಾರ್ಥಿಗಳು ಸತತ ಪ್ರಯತ್ನಿಸಿದಾಗ ಮಾತ್ರ ಪ್ರತಿಫಲ ಸಿಗುತ್ತದೆ ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕಿಯರಾದ ಡಾ:ಖಾಜಿ ಜಬೀನ್ ಮೇಡಂ ದಂಪತಿಗಳಿಗೆ ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.
೨೦೧೯ ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಯಲ್ಲಿ ಹೆಚ್ಚು ಅಂಕ ಪಡೆದ ಕಲಾ ವಿಭಾಗದಲ್ಲಿ ಕು.ಸೈಯದ್ ಸಬಿನಾ ಬೇಗಂ, ವಾಣಿಜ್ಯ ವಿಭಾಗದಲ್ಲಿ ಕು.ನೇಹಾ ಅಂಜುಮ್ ಹಾಗೂ ಸಬಾ ಪರ್ವಿನ್ ಮತ್ತು ವಿಜ್ಞಾನ ವಿಭಾಗದಲ್ಲಿ ಖುಷ್ಬೂ ಖಾನಂ ವಿದ್ಯಾರ್ಥಿನಿಯರಿಗೆ ಪುರಸ್ಕರಿಸಲಾಯಿತು.
ಸಮಾರಂಭದ ಅಧ್ಯಕ್ಷೆತೆ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀಕಾಂತ ಖಣದಾಳಕರ ರವರು ವಹಿಸಿದ್ದರು. ಪಾಲಿಕೆ ಮಾಜಿ ಸದಸ್ಯ ಅಲೀಮ ಪಟೇಲ್, ಮಹಮ್ಮದ್ ಯೂಸೂಫ್, ಸೈಯದ್ ಎಜಾಜ ಅಲಿ ಇನಾಮದಾರ, ಎಮ್ ಡಿ ಮೋಯಿ ಉದ್ದೀನ ಸಾಬ್, ಶೇಖ್ ಖಾಜಾ ಅಥನೂರ, ಡಾ:ಮಸೂದ್ ಹುಸೇನ್, ಮಹಾದೇವ ನಲಕಂಠೆ, ಉಪನ್ಯಾಸಕರಾದ ಡಾ. ವಿಶ್ವನಾಥ ಹೊಸಮನಿ, ಧರ್ಮರಾಜ ಜವಳಿ, ಜಮುನಾ ಬಾಯಿ ಟಿಳೆ,ರೇಷ್ಮಾ ಖಾತುನ, ಡಾ:ಹಜರಾ ಸುಲ್ತಾನಾ, ಆಲಿಯಾ ತಬಸುಬ್ಬ, ದೇವೇಂದ್ರ ನೆಲೋಗಿ ಹಾಜರಿದ್ದರು. ಕಾರ್ಯಕ್ರವನ್ನು ಶಾಂತಗೌಡ ಪಾಟೀಲ ನಿರೂಪಿಸಿದರು, ರಮೇಶ ಮಾಡ್ಯಾಳಕರ ಪ್ರಾಸ್ತಾವಿಕವಾಗಿ ಮಾತನಾಡಿದರು, ಮಹಾದೇವ ನಲಕಂಠೆ ಸರ್ವರನ್ನು ಸ್ವಾಗತಿಸಿದರು, ಸೋಮಶೇಖರ ಚವ್ಹಾಣ ವಂದಿಸಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…