ಬಿಸಿ ಬಿಸಿ ಸುದ್ದಿ

ಶರಣಬಸವ ವಿಶ್ವವಿದ್ಯಾಲಯದಲ್ಲಿ ನಾಳೆಯಿಂದ ಎರಡು ದಿನ ವಿಶ್ವ ಸಾಹಿತ್ಯ ಸಮ್ಮೇಳನ ಕಹಳೆ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಜ. ೩೧ ರಿಂದ ಎರಡು ದಿನಗಳ ಕಾಲ ಆಯೋಜಿಸಿದ್ದ ವಿಶ್ವ ಸಾಹಿತ್ಯ ಸಮ್ಮೇಳನವು, ಫೆ. ೫ರಿಂದ ಕಲಬುರಗಿ ನಗರದಲ್ಲಿ ಮೂರು ದಿನಗಳ ಕಾಲ ನಡೆಯಲ್ಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಕ್ಕೆ ಪರ್ಯಾಯವಾಗಿಲ್ಲ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಶರಣಬಸವೇಶ್ವರ ಸಂಸ್ಥಾನದ ಪಿಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಸ್ಪಷ್ಟಪಡಿಸಿದರು.

ದಾಸೋಹ ಮಹಾಮನೆಯಲ್ಲಿ ಬುಧವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವ ಸಾಹಿತ್ಯ ಸಮ್ಮೇಳನ ವಿಶಿಷ್ಠ ಹಾಗೂ ಬಹುಭಾಷಾ ಸಾಹಿತ್ಯಕ ಸಭೆಯಾಗಿದೆ. ಯಾವುದೇ ಅರ್ಥದಲ್ಲಿ ಹೋಲಿಸಲಾಗುವುದಿಲ್ಲ ಅಥವಾ ಪ್ರತಿಸ್ಪರ್ಧಿ ಸಾಹಿತ್ಯ ಸಭೆಗಳೆಂದು ಪರಿಗಣಿಸಲಾಗುವುದಿಲ್ಲ ಎಂದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಘಟನೆಯಲ್ಲಿ ಶರಣಬಸವೇಶ್ವರ ಸಂಸ್ಥಾನವನ್ನು ನಿರ್ಲಕ್ಷಿಸಿದೆ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಡಾ. ಅಪ್ಪಾಜಿ, ಸಾಹಿತ್ಯ ಪರಿಷತ್ ಅಥವಾ ಸರ್ಕಾರ ಇದರ ಬಗ್ಗೆ ಸಮಾಲೋಚಿಸಿಲ್ಲ ಹಾಗೂ ಆರ್ಥಿಕ ಸಹಾಯ ಕೋರಿಲ್ಲ ಎಂದು ಹೇಳಿದರು. ಈ ಸಮ್ಮೇಳನವು ಸ್ಥಳಿಯ ಬರಹಗಾರರು ಮತ್ತು ಸಾಹಿತಿಕ ವ್ಯಕ್ತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ ನಿರ್ಲಕ್ಷಿಸಿದೆ ಎಂಬ ಗ್ರಹಿಕೆವಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ಮತ್ತು ಕರ್ನಾಟಕ ಎದುರಿಸುತ್ತಿರುವ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಚರ್ಚಿಸಲು ವೇದಿಕೆಯನ್ನು ಒದಗಿಸಿದರೆ, ವಿಶ್ವ ಸಾಹಿತ್ಯ ಸಮ್ಮೇಳನವು ಕನ್ನಡ, ಇಂಗ್ಲಿಷ, ಹಿಂದಿ, ಸಂಸ್ಕೃತ, ಮರಾಠಿ, ಉರ್ದು ಆರು ವಿವಿಧ ಭಾಷೆಗಳ ಬರಹಗಾರರಿಗೆ ಹಾಗೂ ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಅವಕಾಶವನ್ನು ಒದಗಿಸುತ್ತದೆ. ಆಯಾ ಕ್ಷೇತ್ರದಲ್ಲಿಯ ಪ್ರಗತಿಗೆ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ವಿಶ್ವ ಸಾಹಿತ್ಯ ಸಮ್ಮೇಳನವು ಖ್ಯಾತ ಬರಹಗಾರ ಬಿ.ಎಂ. ಶ್ರೀಕಂಠಯ್ಯನವರ ಕನಸಾಗಿತ್ತು ಅದನ್ನು ನಾವು ನನಸುಮಾಡುವ ಕಾರ್ಯ ಕೈಗೆತ್ತಿಕೊಂಡಿದ್ದೇವೆ ಎಂದರು. ಶರಣಬಸವ ವಿಶ್ವ ವಿದ್ಯಾಲಯದ ಮುಖ್ಯ ಆವರಣದ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಜ.೩೧ರಿಂದ ಫೆ.೧ರವರೆಗೆ ೨ದಿನಗಳ ಕಾಲ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿಯಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರ ಸಾನ್ನಿಧ್ಯದಲ್ಲಿ ಸಮ್ಮೇಳನದ ಸಮಾರೋಪ ಸಮಾರಂಭ ಜರುಗಲಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಿಣಿ ಎಸ್. ಅಪ್ಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಖ್ವಾಜಾ ಬಂದೇ ನವಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಗೆಸುದರಾಜ್ ಸಯ್ಯದ್ ಷಾ ಕುಸ್ರೋ, ಹುಸೇನಿ ಸಾಹೇಬ, ಸಂಸ್ಕೃತ ಚಿಂತಕರಾದ ಪ್ರೊ.ಕಾಳೇಗೌಡ ನಾಗವಾರ, ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶರಣಬಸವ ವಿಶ್ವ ವಿದ್ಯಾಲಯದ ಕುಲಪತಿ ಡಾ.ನಿರಂಜನ ವಿ. ನಿಷ್ಠಿ, ವಿವಿ.ಸಮ ಕುಲಪತಿ ಡಾ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಮೌಲ್ಯ ಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಲಕ್ಷ್ಮಿ ಮಾಕಾ ಹಾಗೂ ಡಾ. ಬಸವರಾಜ ಮಠಪತಿ ಇತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago