ಶಹಾಪುರ: ಇದೇ ಫೆಬ್ರುವರಿ ೫.೬.ಮತ್ತು ೭ ರಂದು ಕಲಬುರಗಿಯಲ್ಲಿ ಜರುಗಲಿರುವ ೮೫ ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮದ ಕಲಾ ತಂಡಗಳ ಆಯ್ಕೆಯಲ್ಲಿ ಭಾರಿ ಗೋಲ್ಮಾಲ್ ಆಗಿರುವುದು ಇತ್ತೀಚೆಗೆ ಕಂಡು ಬಂದಿರುವ ಆರೋಪಗಳು ಕೇಳಿ ಬರುತಿವೆ.
ಕಲಾ ತಂಡಗಳ ಪರಿಶೀಲನೆ ಮಾಡದೇ ಏಕಪಕ್ಷೀಯ ನಿರ್ಧಾರದಿಂದ ಸಮಿತಿಯ ಸದಸ್ಯರು ಹಾಗೂ ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಅವರು ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಂಡು ತಮಗೆ ಬೇಕಾದ ಸಂಘ ಸಂಸ್ಥೆಗಳನ್ನು ಕಲಾತಂಡಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಸಾಹಿತ್ಯ ಪರಿಷತ್ತಿನ ನಿಯಮಾವಳಿಯಂತೆ ಆಯಾ ಜಿಲ್ಲಾ ಅಧ್ಯಕ್ಷರ ಶಿಫಾರಸಿನ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮದ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳುವುದನ್ನು ಬಿಟ್ಟು ತಮಗೆ ಬೇಕಾದ ಕಲಾತಂಡಗಳನ್ನು ನೇರವಾಗಿ ಆಯ್ಕೆ ಮಾಡಿದ್ದಾರೆ. ಕಲಬುರಗಿಯನ್ನು ಹೊರತುಪಡಿಸಿ ಬೆಂಗಳೂರಿನಿಂದ ಅತಿ ಹೆಚ್ಚು ಕಲಾತಂಡಗಳಿಗೆ ಪ್ರಾಯೋಜನೆ ನೀಡಿ ಅನುಮಾನಕ್ಕೆ ಎಡೆಮಾಡಿಕೊಟ್ಟಂತಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧ್ಯಕ್ಷರಾದ ಸಿಂಪಿ ಅವರಿಗೆ ಫೋನ್ ಮಾಡಿ ವಿಚಾರಿಸಿದಾಗ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ತಂಡಗಳ ಆಯ್ಕೆಯಲ್ಲಿ ಕೂಡ ಕೆಲವೊಂದಿಷ್ಟು ತಪ್ಪುಗಳಾಗಿವೆ ನಾಳೆನೇ ಇದರ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ನನಗೂ ಕೂಡ ಈ ರೀತಿ ಮಾಡಿರುವುದು ತುಂಬಾ ಬೇಸರವಾಗಿದೆ ಇವತ್ತೇ ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಒಂದು ವೇಳೆ ಸರಿಪಡಿಸದಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…