ಕಲಬುರಗಿ: ಡಿಸಿಎಂ ಹುದ್ದೆಗೆ ನಾನು ಪಟ್ಟು ಹಿಡಿದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಮುಲು, ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ. ಡಿಸಿಎಂ ಪಟ್ಟ ಬೇಕೆಂದು ನಾನು ಪಟ್ಟು ಹಿಡಿದಿಲ್ಲ. ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಮತ್ತು ಸಮಾಜದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಅವರು ಅಭಿಮಾನದಿಂದ ಅಭಿಯಾನ ನಡೆಸುತ್ತಿರಬಹುದು. ಆದರೆ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ಧ ಎಂದು ತಿಳಿಸಿದರು. ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರು ನನ್ನ ಸಹೋದರನಿದ್ದಂತೆ ಎಂದು ಹೇಳಿದರು.
ಬಿಜೆಪಿ ದ್ವೇಷದ ರಾಜಕಾರಣ ಮಾಡಲ್ಲ: ಮಾಜಿ ಸಚಿವರಿಗೆ ಸರ್ಕಾರ ಗನ್ ಮ್ಯಾನ್ ವಾಪಾಸ್ ವಿಚಾರ ಕುರಿತು ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಯಾವತ್ತು ದ್ವೇಷದ ರಾಜಕಾರಣ ಮಾಡಲ್ಲ, ಎಲ್ಲರನ್ನೂ ಸಮಾನವಾಗಿ ನೋಡೋದು ನಮ್ಮ ಪಕ್ಷ ಎಂದರು. ಇನ್ನು ಸಚಿವ ಸಂಪುಟ ವಿಸ್ತರಣೆ ತಿಂಗಳ ಕೊನೆಗೆ, ಇಲ್ಲ ಫೆಬ್ರವರಿ ಮೊದಲ ವಾರ ನಡೆಯಲಿದೆ ಎಂದು ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…