ಬಿಸಿ ಬಿಸಿ ಸುದ್ದಿ

ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿ ಪರಿಶೀಲನೆಯಾಗಲಿ: ಸುಬೋದ್ ಯಾದವ್

ಕಲಬುರಗಿ: ತಹಶೀಲ್ದಾರರು ಹಾಗೂ ಚುನಾವಣಾ ಕಾರ್ಯಗಳಿಗೆ ನೇಮಿಸಿದ ಅಧಿಕಾರಿಗಳು ಪ್ರತಿ ಗ್ರಾಮ ಮತ್ತು ಬೂತ್‌ಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಪ್ರತಿ ಬಿ.ಎಲ್.ಓ.ಗಳಿಂದ ಹೊಸ ಮತದಾರರ ಹಾಗೂ ತಿದ್ದುಪಡಿ ಅರ್ಜಿಗಳ ಕುರಿತು ಮಾಹಿತಿ ಸಂಗ್ರಹಿಸಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಹಾಗೂ ಮತದಾರರ ಪಟ್ಟಿ ವೀಕ್ಷಕ ಸುಬೋಧ ಯಾದವ್ ಅವರು ಹೇಳಿದರು.

ಶುಕ್ರವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಕಲಬುರಗಿ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ-೨೦೧೯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಮತದಾರರ ಪಟ್ಟಿಗೆ ಸಂಬಂಧಿಸಿದ ತಾಲೂಕು ಬಿ.ಎಲ್.ಎ.ಗಳೊಂದಿಗೆ ನೇರವಾಗಿ ಸಂಪರ್ಕವನ್ನು ಹೊಂದಬೇಕು. ನಿಗದಿತ ಸಮಯದೊಳಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬೇಕು. ಆಗ ಮಾತ್ರ ಮತದಾರರ ಪಟ್ಟಿ ಸ್ವಚ್ಛ ಮತ್ತು ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯ ಎಂದರು.

ಮತದಾರರ ಪಟ್ಟಿ ತಯಾರಿಕೆಗೆ ಚುನಾವಣಾ ಅಧಿಕಾರಿಗಳಿಗೆ ಹಾಗೂ ಬಿ.ಎಲ್.ಎ.ಗಳಿಗೆ ಸೂಕ್ತ ತರಬೇತಿಯನ್ನು ನೀಡಬೇಕು. ಕಲಬುರಗಿ ಜಿಲ್ಲೆಯಲ್ಲಿ ೨೧.೭೭ ಲಕ್ಷ ಮತದಾರರಿದ್ದು, ಶೇ.೯೭ರಷ್ಟು ಮತದಾರರ ನೊಂದಣಿ ಕಾರ್ಯ ಮುಗಿದಿದೆ ಎಂದರು. ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಜೇವರ್ಗಿ ತಾಲೂಕಿನಲ್ಲಿ ೩, ಚಿತ್ತಾಪೂರ ತಾಲೂಕಿನಲ್ಲಿ ೨೦, ಸೇಡಂ ತಾಲೂಕಿನಲ್ಲಿ ೨, ಚಿಂಚೋಳಿ ತಾಲೂಕಿನಲ್ಲಿ ೪೦, ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ ೬, ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ೬೧೨ ಮತದಾರರ ಪಟ್ಟಿ ಕುರಿತು ದೂರುಗಳು ಬಂದಿವೆ. ಕಲಬುರಗಿ ಉತ್ತರ ಕ್ಷೇತ್ರದಲ್ಲಿ ೪೧೭ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ವಿವರಿಸಿದರು.

ಮೊಬೈಲ್ ಆಪ್ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನೊಂದಣಿ ಹಾಗೂ ಮತದಾರರ ಪಟ್ಟಿ ಸ್ವಯಂ ದೃಢೀಕರಣ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆಯಿಂದ ಕೆಲವೊಮ್ಮೆ ಎರಡೆರಡು ಬಾರಿ ಅರ್ಜಿಗಳು ಸಲ್ಲಿಕೆಯಾಗಿದ್ದು ಇವುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಮತದಾರರ ಪಟ್ಟಿ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ತಾಲೂಕುಗಳ ತಹಶೀಲ್ದಾರರು, ಕ್ಷೇತ್ರವಾರು ಮತದಾರರ ನೊಂದಣಾಧಿಕಾರಿ, ಸಹಾಯಕ ಮತದಾರರ ನೊಂದಣಾಧಿಕಾರಿ, ಬಿ.ಎಲ್.ಎ.ಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago