ಸಮ್ಮೇಳನ: ಬೀದಿ ನಾಟಕಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ

0
15

ಕಲಬುರಗಿ: ಕಲಬುರಗಿಯಲ್ಲಿ ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶ ನಾಗರೀಕರನ್ನು ಆಹ್ವಾನಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮದಡಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳ ಕ್ಷೇತ್ರ ಪ್ರಚಾರವಾಹನಗಳ ಮೂಲಕ ಬೀದಿ ನಾಟಕಗಳು ಹಾಗೂ ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಕಲಾವಿದವರು ಸಮ್ಮೇಳನಕ್ಕೆ ಆಹ್ವಾನಿಸುವ ಹಾಗೂ ಸರ್ಕಾರದ ಯೋಜನೆಗಳ ಮಾಹಿತಿ ನೀಡುವರು. ಅದಕ್ಕೆಂದೆ ಸಿದ್ದಪಡಿಸಿದ ಪ್ರಚಾರ ವಾಹನಗಳಿಗೆ ಜ.೩೧ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಸುವರ್ಣ ಹಣಮಂತ ಮಾಲಾಜಿ ಅವರು ಚಾಲನೆ ನೀಡಿದರು.

Contact Your\'s Advertisement; 9902492681

ಕಲಬುರಗಿ, ಬೀದರ್, ಯಾದಗರಿ, ರಾಯಚೂರ, ಕೊಪ್ಪಳ್ಳ ಮತ್ತು ಬಳ್ಳಾರಿ ಜಿಲ್ಲೆಗಳ ವಾಹನ ಹಾಗೂ ಒಟ್ಟು ೪೮ ಬೀದಿ ನಾಟಕ ಕಲಾವಿದರು ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮಗಳಿಗೆ ತೆರಳಿ ಸರ್ಕಾರದ ಯೋಜನೆಗಳ ಜೊತೆಗೆ ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾರ್ವಜನಿಕರನ್ನು ಆಹ್ವಾನ ನೀಡುವರು.

ಅಲ್ಲದೇ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ, ಪ್ರಮುಖ ಸ್ಥಳಗಳಲ್ಲಿ ಪೋಸ್ಟರ್‌ಗಳನ್ನು ಅಳವಡಿಸುವರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆರು ಜಿಲ್ಲೆಗಳ ವಿವಿಧ ಕಲಾ ತಂಡಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here