ಶಹಾಪುರ: ಫೆಬ್ರವರಿ ೨ ರಂದು ಸಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ಶಹಾಪುರದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಗಾಂಧಿ ಸ್ಮರಣೋತ್ಸವ ಹಾಗೂ ಕವಿಗೋಷ್ಠಿ ಜೊತೆಗೆ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿನ್ನೂರ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಬೆಳಿಗ್ಗೆ ೧೦:೩೦ಕ್ಕೆ ಮಾಜಿ ಸಚಿವರಾದ ರಾಜಾ ಮದನಗೋಪಾಲ ನಾಯಕ ಅವರು ಉದ್ಘಾಟಿಸಲಿದ್ದು, ಕಲಬುರ್ಗಿಯ ರಂಗಾಯಣದ ನಿರ್ದೇಶಕರಾದ ಶ್ರೀ ಪ್ರಭಾಕರ ಜೋಶಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ, ಈ ಕಾರ್ಯಕ್ರಮದ ನೇತೃತ್ವವನ್ನು ಖ್ಯಾತ ಹಿರಿಯ ಸಾಹಿತಿಗಳಾದ ಸಿದ್ದರಾಮ ಹೊನ್ಕಲ್ ಅವರು ವಹಿಸಿಕೊಳ್ಳಲಿದ್ದು, ಕವಿಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರ್ಗಿಯ ಖ್ಯಾತ ಲೇಖಕಿಯಾದ ಶ್ರೀಮತಿ ಸಂಧ್ಯಾ ಹೊನಗುಂಟಿಕರ್ ವಹಿಸಿಕೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಶ್ರೀಶಾಂತಗೌಡ ಪಾಟೀಲ್ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ,ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಸಿದ್ದಲಿಂಗಣ್ಣ ಆನೆಗುಂದಿ, ಸಾಹಿತ್ಯ ಸಾರಥಿ ಪತ್ರಿಕೆಯ ಸಂಪಾದಕರಾದ ಶ್ರೀ ಬಿ.ಎಚ್. ನಿರಗುಡಿ ಎಂಜಿನಿಯರಾದ ಶ್ರೀ ಎಚ್.ಬಕ್ಕಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ನಂತರ ೧೫ ಕ್ಕೂ ಹೆಚ್ಚು ಕವಿಗಳು ಭಾಗವಹಿಸಿ ತಮ್ಮ ಸ್ವರಚಿತ ಕವನ ವಾಚಿಸಲಿದ್ದಾರೆ ಎಂದು ಬಸವರಾಜ ಸಿನ್ನೂರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…