ಬಿಸಿ ಬಿಸಿ ಸುದ್ದಿ

ಸುರಪುರ ಜನನಿ ಮಹಾವಿದ್ಯಾಲಯದಿಂದ ಪ್ರತಿಭಾ ರತ್ನ ಪ್ರಶಸ್ತಿ ಪ್ರಧಾನ

ಸುರಪುರ: ನಮ್ಮ ಸುತ್ತಮುತ್ತಲಿನ ಅನೇಕ ಪ್ರತಿಭೆಗಳು ಪ್ರೋತ್ಸಾಹವಿಲ್ಲದೆ ಚಿಗುರುವ ಮುನ್ನವೇ ಕಮರಿ ಹೋಗುತ್ತಿವೆ ಇಂತಹ ಸಂದರ್ಭದಲ್ಲಿ ನಮ್ಮ ಪಟ್ಟಣದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿರುವ ಜ್ಞಾನವನ್ನು ಅನ್ವೇಷಣೆಮಾಡಿ ಅವರಿಗೆ ಪ್ರೋತ್ಸಾಹ ನೀಡುತ್ತಿರುವ ಜನನಿ ಮಹಾವಿದ್ಯಾಲಯದ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ರಂಗಂಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಸುಪಾಲ ಬಸವರಾಜ ಕೊಡೇಕಲ್ ಮಾತನಾಡಿದರು.

ನಗರದ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿವಿಧ ಕಾಲೇಜುಗಳಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ ಪ್ರತಿಭಾನ್ವೇಷಣಾ ಪರೀಕ್ಷೆಯನ್ನು ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಜನನಿ ಪ್ರತಿಭಾ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಓದಿನ ಆಸಕ್ತಿ ಹೆಚ್ಚು ಮಾಡಬಹುದು ಹಾಗು ಜ್ಞಾನವನ್ನು ಹೆಚ್ಚಿಸುವ ಒಳ್ಳೆಯ ಕೆಲಸವನ್ನು ಮಹಾವಿದ್ಯಾಲಯ ಹಮ್ಮಿಕೊಂಡಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಭಗವಹಿಸಿದ್ದ ಮುಖಂಡ ಸಣ್ಣದೇಸಾಯಿ ದೇವರಗೋನಾಲ ಮಾತನಾಡಿ, ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಪೂರ್ವದಲ್ಲಿ ಈ ರೀತಿಯ ಕಿರು ಪರೀಕ್ಷೆಗಳನ್ನು ನಡೆಸುವುದರಿಂದ ಅವರಲ್ಲಿ ಪರೀಕ್ಷೆಯ ಬಗ್ಗೆ ಇರುವ ಭಯ ಮತ್ತು ಆತಂಕವನ್ನು ದೂರ ಮಾಡಬಹುದು ಇದರಿಂದ ಮಕ್ಕಳಲ್ಲಿ ಮತ್ತಷ್ಟು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯವಾಗುತ್ತದೆ ಮತ್ತು ವಿದ್ಯಾರ್ಥಿನಿಯರಿಗೆ ವಿಷಯದ ಪರೀಕ್ಷೆಗಾಗಿ ಮಾತ್ರ ತಯಾರಿಸದೆ ಅವರನ್ನು ಬದುಕಿನ ಪರೀಕ್ಷೆಗಳನ್ನು ಮತ್ತು ಸಮಾಜದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುವ ಶಿಕ್ಷಣವನ್ನು ನೀಡುತ್ತಿರುವ ಜನನಿ ಮಹಾವಿದ್ಯಾಲಯದ ಉಪನ್ಯಾಸಕ ವರ್ಗದ ಕಾರ್ಯ ಅಭಿನಂದನಾರ್ಹವಾಗಿದೆ ಎಂದರು.

ಮತ್ತೋರ್ವ ಅತಿಥಿ ಸಿದ್ದಯ್ಯ ಸ್ಥಾವರಮಠ ಮಾತನಾಡಿ, ಪ್ರತಿಭೆಗಳು ಹುಟ್ಟುವುದು ಗುಡಿಸಲಲ್ಲಿ ಆದರೆ ಸಾಯುವುದು ಅರಮನೆಯಲ್ಲಿ ಎನ್ನುವ ನಾಣ್ನುಡಿಯಂತೆ ಅನೇಕ ಬಡತನದ ಕುಟುಂಬದಿಂದ ಬಂದಿರುವ ಅನೇಕ ವಿದ್ಯಾರ್ಥಿನಿಯರ ಪ್ರತಿಭೆಯನ್ನು ಗುರುತಿಸುವ ಕಾರ್ಯವನ್ನು ಮಾಡುತ್ತಿರುವ ಜನನಿ ಮಹಾವಿದ್ಯಾಲಯದ ಕಾರ್ಯವನ್ನು ಶ್ಲಾಘಿಸಿದರು.

ವರ್ತಕ ಶಾಜೀದ್ ಅಲಿ ಅತಿಥಿಗಳಾಗಿ ವೇದಿಕೆ ಮೇಲಿದ್ದರು. ಪ್ರಾಂಶುಪಾಲರಾದ ಬಸವರಾಜೇಶ್ವರಿ ಘಂಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು, ಉಪನ್ಯಾಸಕರಾದ ಡಾ.ಮಲ್ಲಿಕಾರ್ಜುನ ಕಮತಗಿ ರವರು ಪ್ರಾಸ್ಥಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ೨೦೧೯-೨೦ನೇ ಶೈಕ್ಷಣಿಕ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು ಹಾಗೂ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ದೇವಮ್ಮ ಯಂಕಪ್ಪ ಪ್ರಥಮ, ಪವಿತ್ರ ಶಂಕ್ರಪ್ಪ ಚಲವಾದಿ ದ್ವಿತೀಯ, ಮಲ್ಲಮ್ಮ ಕಾಳಿಂಗಪ್ಪ ತೃತೀಯ, ತ್ರಿವೇಣಿ ಭೀಮರಾಯ ಕೊಂಡಿನಾಯಕ ನಾಲ್ಕನೇ ಸ್ಥಾನ ಮತ್ತು ಶಾಂತಾ ಮೋತಿರಾಮ ಐದನೇ ಬಹುಮಾನವನ್ನು ಪಡೆದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಆದಿಶೇಷ ನೀಲಗಾರ, ಮಹೇಶ ಗಂಜಿ, ಚಂದ್ರಶೇಖರ ನಾಯಕ, ಅಂಬ್ರೇಶ ಚಿಲ್ಲಾಳ, ಡಾ. ಹಳ್ಳೆಪ್ಪ ಲಿಂಗದಳ್ಳಿ, ಮರೆಮ್ಮ ಕಟ್ಟಿಮನಿ ಮುಂತಾದವರು ಪಾಲ್ಗೊಂಡಿದ್ದರು ಮೀನಾಕ್ಷಿ ಮತ್ತು ಸೌಂದರ್ಯ ಕಾರ್ಯಕ್ರಮವನ್ನು ನಿರೂಪಿಸಿದರು ಸಹನಾ ಅಸಗಳ್ಳಿ ಸ್ವಾಗತಿಸಿದರು, ಪೃಥ್ವಿ ಸಜ್ಜನ್ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago