ಆಳಂದ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ೨೦೨೦-೨೧ನೇ ಸಾಲಿನ ಬಜೆಟ್ ಸಂತೃಪ್ತಿಯಿಂದ ಕೂಡಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಬಣ್ಣಿಸಿದ್ದಾರೆ.
ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ, ಮುದ್ರಣ ಸುಂಕ ಇಳಿಕೆ, ನೀರಾವರಿ ಯೋಜನೆಗಳಿಗೆ ಆದ್ಯತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟಫೋನ್ ನೀಡುವುದು, ಹಿರಿಯ ನಾಗರಿಕರಿಗೆ ೯ ಸಾವಿರ ಕೋಟಿ ಮೀಸಲು, ಸಾರ್ವಜನಿಕ ಬ್ಯಾಂಕ್‌ಗಳಿಗೆ ೫.೫೦ ಲಕ್ಷ ಕೋಟಿ ಅನುದಾನ, ಪರಿಶಿಷ್ಟ ಜಾತಿ ಇತರೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ೮೫ ಸಾವಿರ ಕೋಟಿ ಅನುದಾನ ಮೀಸಲು, ಲಡಾಖ ಅಭಿವೃದ್ಧಿಗೆ ೫೯೫೮ ಕೋಟಿ, ಜಮ್ಮು ಕಾಶ್ಮೀರ ಅಭಿವೃದ್ಧಿಗೆ ೩೦.೭೫೭ ಕೋಟಿ ಅನುದಾನ ಮೀಸಲು ಇಟ್ಟಿರುವುದು ಸೇರಿದಂತೆ ಉತ್ತಮ ಯೋಜನೆಗಳನ್ನು ಈ ಸಾಲಿನ ಬಜೆಟ್ ಹೊಂದಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.