ಕಲಬುರಗಿ: ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿ ಮಹಾನಗರದಲ್ಲಿ ಫೆ. ೫,೬ ಮತ್ತು ೭ ರಂದು ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಜನತೆ ಭಾಗವಹಿಸಿ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ಜಿ.ಪಂ ಸದಸ್ಯ ಮತ್ತು ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಸದಸ್ಯ ಹರ್ಷಾನಂದ ಗುತ್ತೇದಾರ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಸಾಮಾಜಿಕವಾಗಿ, ಸಾಹಿತ್ತಿಕವಾಗಿ, ಭೌಗೋಳಿಕವಾಗಿ ತನ್ನದೇ ಪರಂಪರೆ ಹೊಂದಿರುವ ಈ ಭಾಗ ಹಲವು ಪ್ರಥಮಗಳನ್ನು ನಾಡಿಗೆ ನೀಡಿದೆ. ಸುದೀರ್ಘ ೩೨ ವರ್ಷಗಳ ನಂತರ ನಡೆಯುತ್ತಿರುವ ಅಕ್ಷರ ಜಾತ್ರೆ ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ. ಉತ್ತರ ಮತ್ತು ದಕ್ಷಿಣದ ಮಧ್ಯೆ ಕೊಂಡಿಯಾಗಿ ನಾಡಿನ ಜನರ ಮಧ್ಯೆ ಸಂಬಂಧ ಬೆಸೆಯುವ ಈ ಐತಿಹಾಸಿಕ ಕಾರ್ಯಕ್ರಮವನ್ನು ಇತಿಹಾಸದ ಪುಟಗಳಲ್ಲಿ ದಾಖಲಿಸೋಣ ಎಂದು ತಿಳಿಸಿದ್ದಾರೆ.
ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಯವರು ಮಾತ್ರ ನೋಡಲು ಮತ್ತು ಭಾಗವಹಿಸಲು ಸಾಧ್ಯವಿರುವ ಸಮ್ಮೇಳನದಲ್ಲಿ ಭಾಗಿಯಾಗಿ ಅಕ್ಷರ ಜಾತ್ರೆಯನ್ನು ಸಂಘಟಿಸೋಣ. ನಮ್ಮ ಕಲ್ಯಾಣ ಕರ್ನಾಟಕದ ಸಾಹಿತ್ಯ, ಸಂಸ್ಕೃತಿ, ಜನಪದ, ಜೀವನ ವಿಧಾನವನ್ನು ಅಖಂಡ ಕರ್ನಾಟಕಕ್ಕೆ ತಿಳಿಸುವ ಕಾರ್ಯದಲ್ಲಿ ಕೈಜೋಡಿಸಿ ಅದರ ಯಶಸ್ಸಿಗೆ ಶ್ರಮಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…