ಬಿಸಿ ಬಿಸಿ ಸುದ್ದಿ

ಸರ್ವರೂ ಸಮ್ಮೇಳನಕ್ಕೆ ಬನ್ನಿ: ಜಿಲ್ಲಾಧಿಕಾರಿ ಶರತ್

ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ ೫ ರಿಂದ ೭ರವರೆಗೆ ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಿಗರೆಲ್ಲರೂ ಬಿಚ್ಚು ಮನಸ್ಸಿನಿಂದ ಪಾಲ್ಗೊಂಡು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಕರೆ ನೀಡಿದರು.

ಅವರು ಫೆ. ೨ ರವಿವಾರ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ಮುಖ್ಯ ವೇದಿಕೆಯ ಬಳಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನುಡಿ ಹಬ್ಬದ ಆಚರಣೆ ನಮ್ಮ ಹಬ್ಬವೆಂಬ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು, ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್‌ದಿಂದ ಎಲ್ಲರಿಗೂ ಆಮಂತ್ರಣ ನೀಡಲಾಗಿದೆ. ಇದರಲ್ಲಿ ಯಾರಿಗೂ ನಿರ್ಲಕ್ಷ್ಯ ಮಾಡಿಲ್ಲ. ಬಿಚ್ಟು ಮನಸ್ಸಿನಿಂದ ಸರ್ವರೂ ನುಡಿ ಜಾತ್ರೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.

ನಗರದಲ್ಲಿರುವ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿಗಳ ಮುಂದೆ ತಳಿ ತೋರಣ ಕಟ್ಟಿ, ರಂಗೋಲಿ ಹಾಕಿ ಅಲಂಕಾರ ಮಾಡಬೇಕು. ಜಿಲ್ಲೆಯಲ್ಲಿ ಹಬ್ಬದ ಕಳೆ ತರಬೇಕು ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಒಟ್ಟು ೧೬ ಸಮಿತಿಗಳನ್ನು ರಚಿಸಲಾಗಿದೆ, ಸಮಿತಿಯ ಎಲ್ಲ ಸದಸ್ಯರು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಖ್ಯ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಗಳಲ್ಲಿ ಆಯೋಜಿಸಲಾದ ಕಾರ್ಯಕ್ರಮಗಳಿಗೆ ಯಾವುದೇ ಸಮಸ್ಯೆ ಬಾರದಂತೆ ಈಗಾಗಲೇ ಎಚ್ಚರ ವಹಿಸಲಾಗಿದೆ.

ಸಮ್ಮೇಳನಕ್ಕೆ ಭಾಗವಹಿಸಲು ನೋಂದಾಯಿಸಿಕೊಂಡಿರುವವರೆಗೆ ವಸತಿ ಹಾಗೂ ಸಾರಿಗೆಯ ವ್ಯವಸ್ಥೆಯನ್ನು ಅಚ್ಟುಕಟ್ಟಾಗಿ ರೂಪಿಸಲಾಗಿದೆ. ಅತಿಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ನಗರದಲ್ಲಿ ೬೦ ಹೊಟೇಲ್‌ಗಳು, ೧೭ ಶಾಲೆಗಳು, ೧೦ ಕಲ್ಯಾಣ ಮಂಟಪಗಳು, ೧೨ ವಸತಿ ನಿಲಯಗಳು, ೯ ಅತಿಥಿ ಗೃಹಗಳು, ೫ ಸರ್ಕಾರಿ ವಸತಿ ಗೃಹಗಳನ್ನು ಬಳಸಿಕೊಳ್ಳಲಾಗಿದೆ. ಅವರೆಲ್ಲರಿಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ವೇದಿಕೆಗಳಲ್ಲಿ ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಪ್ರತಿದಿನ ಒಬ್ಬರನ್ನು ಪ್ರದರ್ಶನದ ಅತ್ಯುತ್ತಮ ವ್ಯಕ್ತಿ ಎಂದು ಸಮಿತಿಯಿಂದ ಘೋಷಿಸಲಾಗುವುದು ಎಂದು ಹೇಳಿದರು.

ಆಹಾರ ಸಮಿತಿಯಿಂದ ೧೫೦ ಕೌಂಟರ್‌ಗಳನ್ನು ತೆರೆದಿದ್ದು, ನೋಂದಾಯಿಸಿಕೊಂಡವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾಗಿ ಮಾಧ್ಯಮದವರಿಗೆ ಕಂಪ್ಯೂಟರ್, ವೈಫೈ, ಊಟದ ವ್ಯವಸ್ಥೆ, ಮಾಧ್ಯಮ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್ ಅವರು ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಯಾಗಿ ನಿರ್ವಹಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ರೂಪಿಸಲಾಗಿದೆ. ಅದಕ್ಕಾಗಿ ೪,೦೦೦ ಪೊಲೀಸರು, ೩+೧ ಪೊಲೀಸ್ ವರಿಷ್ಠಾಧಿಕಾರಿಗಳು, ೧೫ ಎಸಿಪಿ, ೨೫ ಸರ್ಕಲ್ ಇನ್ಸ್‌ಪೆಕ್ಟರ್, ೨೦೦ ಸಬ್‌ಇನ್‌ಪೆಕ್ಟರ್, ೧೦ ಕೆ.ಎಸ್.ಆರ್.ಪಿ. ತುಕ್ಕಡಿ, ೫೦೦ ಹೋಂ ಗಾರ್ಡ್, ೭೦೦ ಟ್ರಾಫಿಕ್ ಪೊಲೀಸ್ ಹಾಗೂ ೫೦೦ ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮ ನಡೆಯುವ ಎಲ್ಲ ಸ್ಥಳಗಳಲ್ಲಿ ಸಿ.ಸಿ. ಟಿ.ವಿ. ಅಳವಡಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ, ಭೂ ದಾಖಲೆಗಳ ಉಪನಿರ್ದೇಶಕ ಶಂಕರ್ ಖಾದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago