ಶಹಾಪುರ: ಭಾರತ ದೇಶ ಬ್ರಿಟಿಷರಿಂದ ಮುಕ್ತಿಗೊಳಿಸಿದ ಮಹಾತ್ಮ ಗಾಂಧೀಜಿಯವರ ಹೋರಾಟದ ಪರಿ ಹಾಗೂ ಅವರ ತತ್ವಾದರ್ಶ, ಸಿದ್ಧಾಂತಗಳು ಇಂದಿನ ಯುವಕರಿಗೆ ಸ್ಫೂರ್ತಿಯಾಗಲಿ ಎಂದು ಕಲಬುರ್ಗಿ ರಂಗಾಯಣದ ನಿರ್ದೇಶಕರಾದ ಪ್ರಭಾಕರ ಜೋಶಿ ಹೇಳಿದರು.
ಸಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ಶಹಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿರುವ ಗಾಂಧಿ ಸ್ಮರಣೋತ್ಸವ ನಿಮಿತ್ತ ಕವಿಗೋಷ್ಠಿ ಹಾಗೂ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮುಂಬರುವ ದಿನಗಳಲ್ಲಿ ಯಾದಗಿರಿ ಜಿಲ್ಲೆಯಲ್ಲಿ ರಂಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುವುದು ಇದಕ್ಕಾಗಿ ಸರಕಾರ ಸಾಕಷ್ಟು ಸಹಾಯ ಮಾಡುತ್ತಿದೆ ರಂಗಭೂಮಿಯಲ್ಲಿ ಆಸಕ್ತಿ ಇರುವ ಕಲಾವಿದರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಇನ್ನೋರ್ವ ಅತಿಥಿಗಳಾದ ಸಾಹಿತ್ಯ ಸಾರಥಿ ಪತ್ರಿಕೆ ಸಂಪಾದಕರಾದ ಶ್ರೀ ಬಿ. ಎಚ್. ನಿರಗುಡಿ ಮಾತನಾಡಿ ಇಂಥ ಸರಕಾರೇತರ ಸಂಘ ಸಂಸ್ಥೆಗಳು ಯುವ ಮನಸ್ಸುಗಳು ಒಟ್ಟಿಗೆ ಸೇರಿಸಿ ಕವಿಗಳಿಗೆ ಹಾಗೂ ಪ್ರತಿಭಾವಂತ ಕಲಾವಿದರಿಗೆ ಪ್ರೋತ್ಸಾಹಿಸಿ ಬೆಳೆಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿ ಎಂದು ಹೇಳಿದರೂ ಪ್ರತಿಭೆ ಅನಾವರಣಕ್ಕೆ ಇಂತಹ ವೇದಿಕೆಗಳು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಕಲಬುರಗಿಯ ಖ್ಯಾತ ಬರಹಗಾರ್ತಿ ಸಂಧ್ಯಾ ಹೊನಗುಂಟಿಕರ್ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕವಿಗಳಾದವರಿಗೆ ಸಾಮಾಜಿಕ ಕಳಕಳಿ ಮತ್ತು ಬದ್ಧತೆ ಇದ್ದಾಗ ಮಾತ್ರ ಉತ್ತಮವಾದ ಸಾಹಿತ್ಯ ಈ ಸಮಾಜಕ್ಕೆ ನೀಡಲು ಸಾಧ್ಯ ಎಂದು ಹೇಳಿದರು. ಅಲ್ಲದೆ ಸಮಾಜದ ಓರೆಕೋರೆಗಳನ್ನು ತಮ್ಮ ಬರವಣಿಗೆಯ ಮೂಲಕ ತಿದ್ದುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಹಿರಿಯ ಕವಿಗಳಾದ ಶಕುಂತಲಾ ಹಡಗಲಿ, ರಮೇಶ ಯಾಳಗಿ, ಭಾಗ್ಯ ದೊರೆ, ಸುವರ್ಣ ರಾಥೋಡ್, ಕೃಷ್ಣಮೂರ್ತಿ, ಜಯಶ್ರೀ, ಮಹಾಲಕ್ಷ್ಮಿ ಹಿರೇಮಠ, ಶಂಕರ್ ಹುಲ್ಕಲ್, ಮಹಾಲಿಂಗ ಗಂಗನಾಳ, ಲಕ್ಷ್ಮಿ ಪಟ್ಟಣಶೆಟ್ಟಿ, ಜ್ಯೋತಿ ನಾಯಕ್, ಶಿವಾನಂದ ತೋಟದ್, ಅಕ್ಬರ್ ಹೊಟ್ಟಿಗಿ,ಸಂತೋಷ್ ನಗನೂರು, ಸ್ವರಚಿತ ಕವನ ವಾಚಿಸಿದರು.
ನಂತರ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಈ ಸಮಾರಂಭದ ವೇದಿಕೆಯ ಮೇಲೆ ಹಿರಿಯ ಸಾಹಿತಿ ಸಿದ್ದರಾಮ ಹೊನಕಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಸಿದ್ದಲಿಂಗಣ್ಣ ಆನೆಗುಂದಿ, ಎಚ್, ಬಕ್ಕಪ್ಪ, ಶಿವಣ್ಣ ಇಜೇರಿ, ಕೃಷಿಕ ಮಡಿವಾಳಪ್ಪ ಗೌಡ ಪೊಲೀಸ್ ಪಾಟೀಲ್, ಸಗರ್ ಎಸ್ ಬಿ ಐ ಮ್ಯಾನೇಜರ್ ನರಸಿಂಹ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಮುಖರಂಜಾ ವನದುರ್ಗ ಪ್ರಾರ್ಥಿಸಿದರು,ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿನ್ನೂರ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಸೂಗುರೇಶ ಗಣಾಚಾರಿಮಠ ನಿರೂಪಿಸಿದರು, ವೀರಭದ್ರಯ್ಯ ಹೈಯ್ಯಾಳ. ವಂದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…