ಸಾಹಿತ್ಯ ಸಮ್ಮೇಳನ: ಮೂರು ದಿನ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

0
146

ಕಲಬುರಗಿ: ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಇದೇ ಫೆಬ್ರವರಿ ೫ ರಿಂದ ೭ರವರೆಗೆ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಮಕ್ಕಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಇದೇ ಫೆಬ್ರವರಿ ೫ ರಿಂದ ೭ರವರೆಗೆ ಮೂರು ದಿನಗಳ ಕಾಲ ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here