ಬಿಸಿ ಬಿಸಿ ಸುದ್ದಿ

ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರಿಂದ 3 ಕೋಟಿ ರೂ. ದೇಣಿಗೆ

ಕಲಬುರಗಿ: ಕಲಬುರಗಿಯಲ್ಲಿ ನಡೆಯುತ್ತಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲೆಯ ಸರ್ಕಾರಿ ನೌಕರರಿಂದ ಒಂದು ದಿನದ ವೇತನ ರೂಪವಾಗಿ ೩ ಕೋಟಿ ರೂ.ಗಳ ದೇಣಿಗೆ ಚೆಕ್ಕನ್ನು ಜಿಲ್ಲಾಧಿಕಾರಿ ಶರತ್ ಬಿ. ಅವರಿಗೆ ಸೋಮವಾರ ನೀಡಲಾಯಿತು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರು ನೌಕರರ ಪರವಾಗಿ ಡಿ.ಸಿ. ಅವರಿಗೆ ಚೆಕ್ ನೀಡಿದರು. ಚೆಕ್ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶರತ್ ಬಿ. ಅವರು ನೃಪತುಂಗನ ನಾಡಿನಲ್ಲಿ ನಡೆಯುತ್ತಿರುವ ಸಮ್ಮೇಳನಕ್ಕೆ ಜಿಲ್ಲೆಯ ನೌಕರ ಬಾಂಧವರು ತಮ್ಮ ಒಂದು ದಿನದ ವೇತನ ದೇಣಿಗೆ ನೀಡುವುದರ ಮೂಲಕ ಸಮ್ಮೇಳನದ ಯಶಸ್ವಿಗೆ ಅಗತ್ಯ ಆರ್ಥಿಕ ಸಹಕಾರ ನೀಡಿರುವುದಕ್ಕೆ ವಿಶೇಷವಾಗಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಮತ್ತು ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರಿಗೆ ಜಿಲ್ಲಾಡಳಿತ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಲೆಂಗಟಿ ಅವರು ಮಾತನಾಡಿ ಮೂರು ದಶಕಗಳ ನಂತರ ನಮ್ಮೂರಿನಲ್ಲಿ ಕನ್ನಡ ಮೇರು ಹಬ್ಬ ನಡೆಯುತ್ತಿರುವುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನಿರ್ದೇಶನದಂತೆ ಮತ್ತು ನೌಕರರ ಬಾಂಧವರ ಒಪ್ಪಿಗೆ ಪಡೆದು ನುಡಿ ಸಮ್ಮೇಳನಕ್ಕೆ ಜಿಲ್ಲೆಯ ನೌಕಕರ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲಾಗಿದೆ ಎಂದರು.

ಓ.ಓ.ಡಿ. ಸೌಲಭ್ಯ ಕಲ್ಪಿಸಲು ಮನವಿ: ಮೂರು ದಿನಗಳ ಸಮ್ಮೇಳನಕ್ಕೆ ಜಿಲ್ಲೆಯ ಸರ್ಕಾರಿ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಓ.ಓ.ಡಿ. ಸೌಲಭ್ಯ ಕಲ್ಪಿಸಬೇಕು ಎಂದು ರಾಜು ಲೇಂಗಟಿ ಅವರು ಡಿ.ಸಿ. ಅವರಿಗೆ ಇದೇ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕಕರ ಸಂಘದ ಗೌರವಾಧ್ಯಕ್ಷ ಅಬ್ದುಲ್ ಅಜೀಮ್, ಪ್ರಧಾನ ಕಾರ್ಯದರ್ಶಿ ವೆಂಕಟರಾವ ಇಟಗಿ, ರಾಜ್ಯ ಪರಿಷತ್ ಸದಸ್ಯ ಹಣಮಂತರಾಯ ಬಿ. ಗೋಳಸಾರ, ಖಜಾಂಚಿ ಸತೀಷ ಕೆ. ಸಜ್ಜನ್, ಉಪಾಧ್ಯಕ್ಷ ಬಾಬು ಎ. ಮೌರ್ಯ, ಚಿತ್ತಾಪೂರ ತಾಲೂಕು ಆದ್ಯಕ್ಷ ಬಸವರಾಜ ಬಳೂಂಡಗಿ, ಸೇಡಂ ತಾಲೂಕು ಅಧ್ಯಕ್ಷ ಶಿವಶಂಕ್ರಯ್ಯ ಮಠಪತಿ, ಪದಾಧಿಕಾರಿಗಳಾದ ನಿಜಲಿಂಗಪ್ಪ ಕೊರಳ್ಳಿ, ಗುರುಲಿಂಗಪ್ಪ ಪಾಟೀಲ, ಕೃಷ್ಣಾಚಾರ್ಯ, ವಿಶ್ವನಾಥ ಕಟ್ಟಿಮನಿ, ಪ್ರಕಾಶ ಹಯ್ಯಾಳಕರ್, ರವಿ ಮಿರಸ್ಕರ್ ಸೇರಿದಂತೆ ಇತರೆ ಪದಾಧಿಕಾರಿಗಳು ಇದ್ದರು.

ನರೇಗಾ ನೌಕರರಿಂದ ೨೮೦೦೦ ರೂ. ದೇಣಿಗೆ

ಕಲಬುರಗಿಯಲ್ಲಿ ನಡೆಯುತ್ತಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಲಬುರಗಿ ಜಿಲ್ಲೆಯ ಹೊರಗುತ್ತಿಗೆ ನೌಕರರು ೨೮೦೦೦ ರೂ. ಗಳ ದೇಣಿಗೆ ಡಿ.ಡಿ.ಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ. ಅವರಿಗೆ ಸೋಮವಾರ ನೀಡಿದರು.

ನರೇಗಾ ನೌಕರರಾದ ಡಿಪಿಎಂಯು ನಾಗರಾಜ, ರಾಜು ಒಂಟಿ, ಸಿದ್ಧರಾಮ ಕೆರೂರ್, ಸತೀಷ ಬೂದಿಹಾಳ, ಹರೀಶ ಸಾಹು, ಮೋಸಿನ್ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago