ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಫೆ.೫ ರಿಂದ ಮೂರು ದಿನಗಳ ಕಾಲ ನಡೆಯಲಿರುವ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ೫ ಲಕ್ಷ ರೂ. ಕೊಡುಗೆಯಾಗಿ ನೀಡಿದ್ದಾರೆ.
ಜಿಲ್ಲಾಧಿಕಾರಿ ಬಿ.ಶರತ್ ಅವರು ಪರಮ ಪೂಜ್ಯ ಅಪ್ಪಾಜೀಯವರನ್ನು ಭೇಟಿಯಾಗಿ ಲಿಖಿತ ರೂಪದಲ್ಲಿ ಸಮ್ಮೇಳನಕ್ಕೆ ಕೊಡುಗೆ ನೀಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಹಾಗೂ ಶರಣಬಸವ ವಿಶ್ವ ವಿದ್ಯಾಲಯ ಪರವಾಗಿ ೫ ಲಕ್ಷ ರೂ. ದೇಣಿಗೆ ನೀಡುವುದಾಗಿ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಸಮ್ಮೇಳನವನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸುವ ವೆಚ್ಚವನ್ನು ಉದಾರವಾಗಿ ದೇಣಿಗೆ ನೀಡುವಂತೆ ಮನವಿ ಮಾಡಿಕೊಂಡರು.
ಸಮ್ಮೇಳನಕ್ಕೆ ಸಹಕಾರ ಬೆಂಬಲ ನೀಡಲು ಒಪ್ಪಿದ ಪೂಜ್ಯ ಅಪ್ಪಾಜಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವ ವಿಶ್ವ ವಿದ್ಯಾಲಯದ ಪರವಾಗಿ ೫ ಲಕ್ಷ ರೂಪಾಯಿ ದೇಣಿಗೆಯ ಚೆಕ್‌ನ್ನು ಗುರುವಾರ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…