ವಾಡಿ: ಕುಷ್ಠ ರೋಗಿಗಳನ್ನು ಅಸ್ಪೃಶ್ಯರಂತೆ ಕಾಣುವ ಮೂಲಕ ಅವರನ್ನು ಮಾನಸಿಕವಾಗಿ ಸಾಯಿಸದೆ, ಅವರನ್ನು ಸ್ಪರ್ಶಿಸಿ ಉಪಚರಿಸಬೇಕು. ಆತ್ಮೀಯವಾಗಿ ಬೆರೆತು ಮನುಷ್ಯರಂತೆ ಕಾಣಬೇಕು ಎಂದು ಪುರಸಭೆ ಸಮುದಾಯ ಸಂಘಟಕ ಅಧಿಕಾರಿ ಕಾಶೀನಾಥ ಧನ್ನಿ ಹೇಳಿದರು.
ಸ್ಥಳೀಯ ಪುರಸಭೆ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠ ರೋಗ ಇಲಾಖೆ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಕುಷ್ಠ ರೋಗ ಜಾಗೃತಿ ಅಭಿಯಾನ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು. ಕುಷ್ಠ ರೋಗ ಗುಣಪಡಿಸಲಾಗದ ಕಾಯಿಲೆ ಅಲ್ಲ. ಆರೋಗ್ಯ ಇಲಾಖೆಯಲ್ಲಿ ಇದಕ್ಕೆ ಸೂಕ್ತ ಚಿಕಿತ್ಸೆಯಿದೆ. ಇಂತಹ ರೋಗಿಗಳು ನಮ್ಮ ಸುತ್ತಮುತ್ತ ಕಂಡುಬಂದರೆ ಅವರನ್ನು ಅಸಡ್ಡೆಯಿಂದ ಕಾಣದೆ ಗೌರವಯುತವಾಗಿ ಮಾತನಾಡುವ ಮೂಲಕ ಸಂಕಟಗಳನ್ನು ಅರಿತುಕೊಳ್ಳಬೇಕು. ಪ್ರೀತಿ ವಿಶ್ವಾಸ ತೋರುವ ಜತೆಗೆ ಆತ್ಮಗೌರವ ಹೆಚ್ಚಿಸಬೇಕು ಎಂದು ಹೇಳಿದರು.
ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಮೇಲ್ವಿಚಾರಕಿ ಮಂಜುಳಾ ಬುಳ್ಳಾ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹುತಾತ್ಮ ದಿನವನ್ನು ಕುಷ್ಠ ರೋಗಿಗಳ ಕಷ್ಟಕ್ಕೆ ಸ್ಪಂಧಿಸುವ ಮಹತ್ವದ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಪ್ರತಿದಿನವೂ ಅಸಹಾಯಕ ರೋಗಿಗಳ ನೋವಿಗೆ ಮಿಡಿಯುವ ಹೃದಯ ಹೊಂದಬೇಕು. ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಲು ಬದ್ಧರಾಗಬೇಕು ಎಂದರು.
ಪುರಸಭೆಯ ಹಿರಿಯ ಆರೋಗ್ಯ ನೈರ್ಮಲ್ಯಾಧಿಕಾರಿ ಶರಣಪ್ಪ ಮಡಿವಾಳ, ಸರಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಲಲಿತಾ, ಎಲ್.ನಾಗೇಶ, ಶಿವುಕಾಂತಮ್ಮ, ಸುಶೀಲ ಕಟ್ಟಿ ಸೇರಿದಂತೆ ಆಶಾ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು ಹಾಗೂ ಪುರಸಭೆ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು. ಮಹಾತ್ಮಾ ಗಾಂಧಿ ವೃತ್ತದಿಂದ ಆರಂಭಗೊಂಡ ಕುಷ್ಠರೋಗ ಜಾಗೃತಿ ಅಭಿಯಾನ ಜಾಥಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು. ಇದೇ ವೇಳೆ ಕುಷ್ಠರೋಗ ನಿವಾರಣೆ ಕುರಿತು ಸಾಮೂಹಿಕವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…