ಬಿಸಿ ಬಿಸಿ ಸುದ್ದಿ

ಸುರಪುರ: ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ

ಸುರಪುರ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಗಳಿಸಲು ಸತತ ಪರಿಶ್ರಮ ವಹಿಸಿ ಓದುವುದು ತುಂಬಾ ಅಗತ್ಯ ಜೀವನದಲ್ಲಿ ಏನನ್ನಾದರೂ ಸಾಧಿಸುವ ಗುರಿಯನ್ನು ಇಟ್ಟುಕೊಂಡಿರಬೇಕು ಆ ಗುರಿ ಸಾಧಿಸಲು ಸತತ ಅಧ್ಯಯನ ಹಾಗೂ ಶ್ರಮ ತುಂಬಾ ಅಗತ್ಯ ಎಂದು ಚಾಮನಾಳ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಇನಾಮದಾರ ಹೇಳಿದರು.

ನಗರದ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ೨೦೧೯-೨೦ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕಾಲಿಟ್ಟಿದ್ದು ಪುರುಷರಿಗೆ ಕಡಿಮೆ ಇಲ್ಲದಂತೆ ವಿವಿಧ ರಂಗಗಳಲ್ಲಿ ಅನೇಕ ಸಾಧನೆಗಳನ್ನು ಮಾಡಿ ತೋರಿಸಿದ್ದಾರೆ ಎಂದ ಅವರು, ಪಿಯುಸಿ ಹಂತವು ವಿದ್ಯಾರ್ಥಿ ಜೀವನದಲ್ಲಿ ತುಂಬಾ ಮುಖ್ಯವಾಗಿದ್ದು ಪರಿಶ್ರಮ ವಹಿಸಿ ಅಭ್ಯಾಸ ಮಾಡುವ ಮೂಲಕ ಉತ್ತಮ ಫಲಿತಾಂಶ ಗಳಿಸಿ ಜೀವನದಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಒಳ್ಳೆಯ ಸ್ಥಾನ ಗಳಿಸಿ ಕಾಲೇಜಿಗೆ ಹಾಗೂ ತಂದೆ ತಾಯಿಯರಿಗೆ ಉತ್ತಮ ಹೆಸರು ತರುವಂತೆ ಅವರು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೈದಾಬಿ ಜಮಾದಾರ ಮಾತನಾಡಿ ಸತತ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಯಶಸ್ಸು ಲಭಿಸುವುದು ಖಂಡಿತ, ವಿದ್ಯಾರ್ಥಿನಿಯರು ಚೆನ್ನಾಗಿ ಓದಿ ಉನ್ನತ ಸಾಧನೆಗೈದು ಭವಿಷ್ಯದಲ್ಲಿ ದೇಶಕ್ಕೆ ಹೆಸರು ತಂದುಕೊಡುವ ಕಾರ್ಯ ಮಾಡುವಂತೆ ಕರೆ ನೀಡಿದರು, ಇಂದು ಸರಕಾರ ಮಹಿಳೆಯರ ಶಿಕ್ಷಣಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡಿದ್ದು ಇವುಗಳ ಸದುಪಪಯೋಗ ಪಡೆದುಕೊಳ್ಳುವ ಮೂಲಕ ವಿದ್ಯಾರ್ಥಿನಿಯರು ಉತ್ತಮವಾಗಿ ಅಭ್ಯಾಸ ಮಾಡುವಂತೆ ಅವರು ಕಿವಿ ಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ವೆಂಕಟೇಶನಾಯಕ, ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಹಸೀನಾಬಾನು, ಶ್ರೀನಿವಾಸ ಚಿದಳ್ಳಿ ಉಪಸ್ಥಿತರಿದ್ದರು, ಉಪನ್ಯಾಸಕರಾದ ಜಗದೀಶ ಪತ್ತಾರ ಸ್ವಾಗತಿಸಿದರು ಪೂಜಾ ಠಾಕೂರ ವಾರ್ಷಿಕ ವರದಿ ವಾಚಿಸಿದರು ಶಿವಶಂಕರ ಮೋಳ್ಕರ ನಿರೂಪಿಸಿದರು ಹಾಗೂ ತಲ್ಕೀದ್ ಫಾತೀಮಾ ವಂದಿಸಿದರು. ಉಪನ್ಯಾಸಕರಾದ ಸುರೇಶ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago