ಸುರಪುರ: ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಶ್ರೀಗುರು ಸೇವಾಸಂಸ್ಥೆಯಿಂದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಸ್ಫರ್ಧೆ ಸ್ನೇಹಮಯ ಆಗಿರಬೇಕೆ ವಿನಃ ಅದು ದ್ವೇಷಮಯವಾಗಿರಬಾರದು,ಪ್ರತಿಯೊಬ್ಬ ವಿದ್ಯಾರ್ಥಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ವಿದ್ಯಾರ್ಥಿಗಳಲ್ಲಿ ಮೊದಲು ಶಿಸ್ತು ಬಹುಮುಖ್ಯವಾದ ಸಂಗತಿಯಾಗಿದೆ.ಶಿಸ್ತನ್ನು ರೂಢಿಸಿಕೊಂಡ ವಿದ್ಯಾರ್ಥಿ ಬದುಕಿನಲ್ಲಿ ಎತ್ತರಕ್ಕೆ ಏರಬಲ್ಲನು,ಇದನ್ನ ಅರಿತ ಮಹಾನುಭಾವರು ಶಿಸ್ತೆ ಶಿಕ್ಷಣದ ಮೊದಲ ಮೆಟ್ಟಿಲು ಎಂದಿದ್ದಾರೆ.ಅಂತಹ ಶಿಸ್ತನ್ನು ಎಲ್ಲ ಮಕ್ಕಳು ರೂಢಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ಹಣಮಂತ ಗೋನಾಲ ಮಾತನಾಡಿ,ಇಂದು ಪ್ರತಿಯೊಬ್ಬ ತಂದೆ ತಾಯಂದಿರು ತಮ್ಮ ಮಕ್ಕಳು ಭವಿಷ್ಯದಲ್ಲಿ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಹೊತ್ತು ಮಕ್ಕಳನ್ನು ಓದಲು ಕಳುಹಿಸುತ್ತಾರೆ.ಅವರ ಆಸೆ ನಿರಾಶೆಗೊಳಿಸದೆ ಛಲದಿಂದ ಓದಿ ಬದುಕಿನಲ್ಲಿ ದೊಡ್ಡ ಸಾಧನೆ ಮಾಡುವ ಸಂಕಲ್ಪ ಮಾಡುವ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಚರ್ಮ ವಾದ್ಯ ನುಡಿಸುವ ಮೂಲಕ ಚಾಲನೆ ನೀಡಲಾಯಿತು,ನಂತರ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆ ಪ್ರದರ್ಶಿಸಿದರು.ಕಾರ್ಯಕ್ರಮದಲ್ಲಿ ಶರಣು ಬಸಣ್ಣೋರ,ಶಿವಗುಂಡಪ್ಪ ಜಾಲಹಳ್ಳಿ ಸೇರಿದಂತೆ ಅನೇಕ ಜನ ಶಿಕ್ಷಕರು ಹಾಗು ಮಕ್ಕಳು ಶಿಬಿರದಲ್ಲಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…