ಬಿಸಿ ಬಿಸಿ ಸುದ್ದಿ

ಅಕ್ಷರ ಜಾತ್ರೆ 6 ನಿರ್ಣಯಗಳ ಮೂಲಕ ಸಮಾಪ್ತಿ : ಹಾವೇರಿಯಲ್ಲಿ 86ನೇ ಸಾಹಿತ್ಯ ಸಮ್ಮೇಳನ

ಕಲಬುರಗಿ: 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿನ ಶ್ರೀವಿಜಯ ವೇದಿಕೆಯಲ್ಲಿ ಬಹಿರಂಗ ಅಧಿವೇಶನ ನಿರ್ಣಯ ಅಂಗೀಕರಿಸಲಾಯಿತು.

ಕಸಾಪ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಸಾಪ ಗೌರವ ಕಾರ್ಯದರ್ಶಿ ಮಲ್ಲಿಕಾರ್ಜುನಪ್ಪ ನಿರ್ಣಯ ಮಂಡನೆ ಮಾಡಿದರು.

85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ 6 ಪ್ರಮುಖ ನಿರ್ಣಯಗಳು ಇಂತಿವೆ :

  • ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಕಡ್ಡಾಯಗೊಳಿಸಬೇಕು.
  • 371(ಜೆ) ಕಲಂ ತಿದ್ದುಪಡಿಯ ಲೋಪದೋಷಗಳನ್ನು ಸರಿಪಡಿಸಬೇಕು, ಸಮರ್ಪಕ ಅನುಷ್ಠಾನ ಕ್ರಮ ಕೈಗೊಳ್ಳಬೇಕು.
  • ಕಲ್ಯಾಣ ಕರ್ನಾಟಕ ಐತಿಹಾಸಿಕ ತಾಣಗಳ ಅಭಿವೃದ್ಧಿ.
  • ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹ.
  • ಗಡಿ ವಿಷಯದಲ್ಲಿ ಮಹಾರಾಷ್ಟ್ರದ ಉದ್ಧಟತನಕ್ಕೆ ಖಂಡನೆ.
  • ಮಹಾಜನ್ ವರದಿಯೇ ಅಂತಿಮ, ಅದನ್ನ ಅನುಷ್ಠಾನಕ್ಕೆ ತಂದು ವಿವಾದ ಕೊನೆಗಾಣಿಸಲು ಆಗ್ರಹ

ಹೀಗೆ ಸೇರಿ 6 ನಿರ್ಣಯಗಳನ್ನು ಅಂಗೀಕಾರ ಮಾಡಲಾಯಿತು. ಮುಂದಿನ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕಲಬುರ್ಗಿಯ ಜಿಡಿಎ ಕಛೇರಿ ಸಭಾಂಗಣದಲ್ಲಿ ನಿನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸಭೆಯಲ್ಲಿ ಈ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago