ಬಳ್ಳಾರಿ: ಕನ್ನಡ ಹಂಪಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸೋಮವಾರ ಮಧ್ಯಾಹ್ನದ ಊಟ ಸೇವಿಸಿದ, ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಆಗಿದೆಂದು ವರದಿಯಾಗಿದ್ದು, ಅಲ್ಲದೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ,
ವಿಶ್ವವಿದ್ಯಾಲಯದಲ್ಲಿರು ವಿದ್ಯಾರ್ಥಿ ಅಸ್ಮಿತಾ ಹಾಸ್ಟೆಲ್ ನಲ್ಲಿ ಮಧ್ಯಾಹ್ನದ ಊಟ ಸೇವಿಸಿದರು, ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತೆ. ಅಲ್ಲದೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಫುಡ್ ಪಾಯ್ಸನ್ ನಿಂದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದೆಂದು ಹೇಳಲಾಗುತ್ತಿದ್ದು, ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಹತ್ತಿರದ ಕಮಲಾಪುರ ಮತ್ತು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫುಡ್ ಪಾಯ್ಸನ್ ಆಗಿರುವುದಕ್ಕೆ ನಿಖರ ಕಾರಣ ಇದುವರೆಗೆ ತಿಳಿದುಬಂದಿಲ್ಲ.