ಯಾದಗಿರಿ: ಕಲುಷಿತ ನೀರು ಕುಡಿದು ಸುಮಾರು 80ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ವರ್ಕಕನಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ವಾರದಿಂದ ಗ್ರಾಮಸ್ಥರು ವಾಂತಿ, ಬೇಧಿ ಹಾಗೂ ಜ್ವರದಿಂದ ಬಳಲುತ್ತಿದ್ದು, ಘಟನೆಗೆ ಕುಡಿಯಲು ಯೋಗ್ಯವಲ್ಲದ ನೀರಿನ ಸರಬರಾಜು ಮಾಡಿರುವ ಗ್ರಾಮ ಪಂಚಾಯತಿ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಸದ್ಯ ಅಸ್ವಸ್ಥಗೊಂಡ ಗ್ರಾಮಸ್ಥರಿಗೆ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನೀರಿನ ಸ್ಯಾಂಪಲ್ ಪರೀಕ್ಷೆ ರವಾನಿಸಲಾಗಿದೆ.