ಆಳಂದ: ತಾಲೂಕಿನ ಮುನ್ನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಿಂದ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಮುನ್ನಹಳ್ಳಿಯಿಂದ ಸಮುಸ್ಥಾನಿಯವರೆಗಿನ ೫೦ ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿ, ೩೦ ಲಕ್ಷ ರೂ ವೆಚ್ಚದ ಶಾಲಾ ತಡೆಗೊಡೆ ಮತ್ತು ಸುಸಜ್ಜಿತ ಶೌಚಾಲಯ, ೫ ಲಕ್ಷ ರೂ ವೆಚ್ಚದ ಅಂಗನವಾಡಿ ಕೇಂದ್ರ, ೧೫ ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ನನ್ನ ಅಧಿಕಾರಾವಧಿಯಲ್ಲಿ ಶಾಲಾ ಕೋಣೆಗಳು, ಕುಡಿಯುವ ನೀರು, ರಸ್ತೆ ಸೇರಿದಂತೆ ಜನಜೀವನಕ್ಕೆ ಪ್ರಮುಖವಾಗಿ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಹಣಮಂತರಾವ ಮಾಲಾಜಿ, ಶಿವಪುತ್ರಪ್ಪ ಬೆಳ್ಳೆ, ಸಿದ್ದಾರೂಢ ಬುಜುರ್ಕೆ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…