ಬಿಸಿ ಬಿಸಿ ಸುದ್ದಿ

ಸೇಡಂ ನೇಮಕಕ್ಕೆ ಹರ್ಷಾನಂದ ಗುತ್ತೇದಾರ ಹರ್ಷ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಈ ಭಾಗದ ಹಿರಿಯ ಮುಖಂಡರಾದ ಡಾ. ಬಸವರಾಜ ಪಾಟೀಲ ಸೇಡಂ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿರುವುದಕ್ಕೆ ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಭಾಗದ ಸಮಗ್ರ ದೃಷ್ಟಿಕೋನ ಹೊಂದಿರುವ ಡಾ. ಪಾಟೀಲರು ರಾಜ್ಯಸಭೆ ಸದಸ್ಯರಾಗಿ, ಲೋಕಸಭೆ ಸದಸ್ಯರಾಗಿ ಅಪಾರ ಅನುಭವ ಹೊಂದಿದ್ದಾರೆ. ಇಲ್ಲಿಯ ನೆಲ, ಜಲ, ಜನ, ಸಂಸ್ಕೃತಿ ಸೇರಿದಂತೆ ಎಲ್ಲ ವಿಷಯಗಳ ಆಳವಾದ ಜ್ಞಾನ, ಮಾಹಿತಿ ಹೊಂದಿದವರಾಗಿದ್ದಾರೆ ಅವರ ಸೇವೆಯನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ.

ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ವಿಕಾಸ ಅಕಾಡೆಮಿ ಸಂಸ್ಥೆಗಳ ಮೂಲಕ ಈ ಭಾಗದಲ್ಲಿ ಗುಣಾತ್ಮಕ, ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ನೆಲದಲ್ಲಿ ಅನೇಕ ದಶಕಗಳಿಂದ ಕಾರ್ಯ ಮಾಡುತ್ತಾ ಬಂದಿದ್ದಾರೆ. ಡಾ. ಬಸವರಾಜ ಪಾಟೀಲ ಸೇಡಂ ಅವರನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಹರ್ಷಾನಂದ ಗುತ್ತೇದಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago