ಕಲಬುರಗಿ: ಜೈ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಳಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ಮಾಡಿದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪಟ್ಟಣಶೆಟ್ಟಿ, ಶ್ರೀಕಾಂತ ಆಲೂರ, ಬಾಲರಾಜ, ಪ್ರಭು ಗುಡಿ, ಶರಣು ಖಾನಾಪುರು ಇತರರಿದ್ದರು.