ಸುರಪುರ: ನಗರದ ಬಸವೇಶ್ವರ ಪತ್ತಿನ ಸಹಕಾರ ಸಂಘಕ್ಕೆ ಇದೇ ಫೆಬ್ರವರಿ ೧೪ ರಂದು ಚುನಾವಣೆ ನಡೆಯಲಿದ್ದು,ಒಟ್ಟು ೫೯ ಜನ ಸ್ಪರ್ಧಿಗಳು ಕಣದಲ್ಲಿದ್ದಾರೆ.ಚುನಾವಣೆ ಹತ್ತಿರವಿರುವ ಸಂದರ್ಭದಲ್ಲೆ ೫೯ ಜನ ಸ್ಪರ್ಧಿಗಳಲ್ಲಿ ಸೋಮವಾರ ೨೧ ಜನ ಅಭ್ಯಾರ್ಥಿಗಳು ವಿವಿಧ ಕಾರಣಗಳಿಂದ ಚುನಾವಣಾ ಕಣದಿಂದ ಹಿಂದೆ ಸರಿದು ನಿವೃತ್ತಿ ಘೋಷಿಸಿದ್ದರು.ಅದರ ಮುಂದುವರೆದ ಭಾಗವಾಗಿ ಇಂದು (ಮಂಗಳವಾರ) ಮತ್ತಿಬ್ಬರು ಅಭ್ಯಾರ್ಥಿಗಳು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು ಒಟ್ಟು ೨೩ ಜನ ಅಭ್ಯಾರ್ಥಿಗಳು ಈಬಾರಿಯ ಚುನಾವಣೆಯಿಂದ ನಿವೃತ್ತಿ ಘೋಷಿಸಿದಂತಾಗಿದೆ.
ಇಂದು ನಡೆದ ಬೆಳವಣಿಗೆಗಳಲ್ಲಿ ಸಂಘದ ಹಾಲಿ ಅಧ್ಯಕ್ಷರಾಗಿರುವ ಸುರೇಶ ಸಜ್ಜನವರ ಪ್ರತಿಸ್ಪರ್ಧಿಗಳಾಗಿದ್ದ ನೀಲಮ್ಮಾ ರಾಜಶೇಖರ ಅವರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದು ಸಮಾಜದ ಹಿತದೃಷ್ಟಿಯಿಂದಾಗಿ ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.ಅದರಂತೆ ಮತ್ತೊಬ್ಬ ಸಾಮಾನ್ಯ ಅಭ್ಯಾರ್ಥಿಯಾಗಿ ಸ್ಪರ್ಧಿಸಿದ್ದ ರಾಜಶೇಖರ ಎಸ್.ಕುಂಬಾರ ಕೂಡ ಚುನಾವಣೆಯಿಂದ ಹಿಂದೆ ಸರಿದಿದ್ದು,ಸುರೇಶ ಸಜ್ಜನ್ ಪ್ಯಾನಲ್‌ಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…