ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯ: ನ್ಯಾಯಾಧೀಶ ಶಿವನಗೌಡ

0
43

ಶಹಾಪುರ: ಭಾರತ ದೇಶದ ಪ್ರತಿಯೊಬ್ಬ ಸಾರ್ವಜನಿಕರಿಗೂ ಕಾನೂನು ಅರಿವು ತಿಳಿದುಕೊಳ್ಳುವುದು ಅತ್ಯವಶ್ಯಕ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಅರಿವು ನೆರವು ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ ಹೇಳಿದರು.

ಶಹಾಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಕಾನೂನು ಅರಿವು ನೆರವು ಪ್ರಾಧಿಕಾರದ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಹಾಗೂ ಸಂಚಾರಿ ರಥ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಸಮಾಜದಲ್ಲಿ ಪ್ರಜೆಗಳು ತಮ್ಮ ಹಕ್ಕನ್ನು ಪಡೆದುಕೊಳ್ಳುವುದರ ಜೊತೆಗೆ ಒಳ್ಳೆಯ ಮಾರ್ಗದಲ್ಲಿ ನಡೆಯಬೇಕು ಅಲ್ಲದೆ ಮತ್ತೊಬ್ಬರಿಗೆ ಸ್ಫೂರ್ತಿಯಾಗಿ ಬದುಕಬೇಕು ಎಂದು ಸಲಹೆ ನೀಡಿದರು.

ಇನ್ನೋರ್ವ ಅತಿಥಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ್ ಅರ್ಜುನ್ ಬನಸೋಡೆ ಮಾತನಾಡಿ ಸಂವಿಧಾನದ ಕುರಿತು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಜನಜಾಗೃತಿ ಮೂಡಿಸಿ ಅದರ ಬಗ್ಗೆ ತಿಳಿವಳಿಕೆ ನೀಡುವ ನಿಟ್ಟಿನಲ್ಲಿ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಬುದ್ಧ ಬಸವ ಅಂಬೇಡ್ಕರ್ ಅವತ ತತ್ವಗಳನ್ನು ಅಳವಡಿಸಿಕೊಂಡು ಈ ತತ್ವಗಳ ಆಧಾರದ ಮೇಲೆ ಸಂವಿಧಾನ ರಚನೆಗೊಂಡಿದೆ ಎಂದು ಹೇಳಿದರು.

ಈ ಸಮಾರಂಭದ ವೇದಿಕೆಯ ಮೇಲೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಅರಿವು ಪ್ರಾಧಿಕಾರದ ಶಹಾಪುರ ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಭಾಮಿನಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹನುಮಂತರಾವ್ ಕುಲಕರ್ಣಿ, ಹೆಚ್ಚುವರಿ ನ್ಯಾಯಾಧೀಶರಾದ ಶ್ರೀ ಕಾಡಪ್ಪ ಹುಕ್ಕೇರಿ, ಸಹಾಯಕ ಸರ್ಕಾರಿ ಆಯೋಜಕರಾದ ಮಹಾಂತೇಶ ಮಸಳಿ, ಶಹಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎಂ.ಎಸ್. ರಾಂಪುರೆ, ಶಹಾಪುರ ತಾಲ್ಲೂಕು ದಂಡಾಧಿಕಾರಿಗಳಾದ ಜಗನ್ನಾಥ ರೆಡ್ಡಿ, ಸಮಾಜ ಕಲ್ಯಾಣ ಅಧಿಕಾರಿಯಾದ ರಾವುತಪ್ಪ ಹವಾಲ್ದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಗುರುರಾಜ್, ಪಿಎಸ್ಐ ಚಂದ್ರಕಾಂತ್, ಬಿ.ಗುಡಿ ಪಿಎಸ್ಐ ರಾಜಕುಮಾರ್ ಜಮಾಗೊಂಡ, ಸಂಪನ್ಮೂಲ ವ್ಯಕ್ತಿಗಳು ಹಾಗೂ ಹಿರಿಯ ವಕೀಲರಾದ ಶ್ರೀ ಭಾಸ್ಕರರಾವ್ ಮೂಡಬೂಳ, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾಯಿತಿ ಇಒ ಜಗನ್ನಾಥ ಮೂರ್ತಿ ವಹಿಸಿಕೊಂಡಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಕವಿತಾ ಪತ್ತಾರ ಪ್ರಾರ್ಥಿಸಿದರು ಹೊನ್ನಾರೆಡ್ಡಿ ನಿರೂಪಿಸಿದರು ವಿಶ್ವನಾಥ ರೆಡ್ಡಿ ಪಾಟೀಲ್ ಸ್ವಾಗತಿಸಿದರು,ಭೀಮನಗೌಡ ಪಾಟೀಲ್ ವಂದಿಸಿದರು. ಇತರರು ಉಪಸ್ಥಿತರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here