ಫೆಬ್ರವರಿ 16 ರಂದು ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ

0
67

ಕಲಬುರಗಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ೨೦೧೯-೨೦ನ್ನು ಭಾನುವಾರ ಫೆಬ್ರವರಿ ೧೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಸಮಾರಂಭವನ್ನು ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಪ್ರಶಸ್ತಿ ಪ್ರದಾನ ಮಾಡುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಪ್ರಾಸ್ತಾವಿಕವಾಗಿ ಮಾತನಾಡುವರು. ಮಾಜಿ ಸಂಸದರು ಹಾಗೂ ಶಿಕ್ಷಣ ತಜ್ಞರಾದ ಬಸವರಾಜ ಪಾಟೀಲ್ ಸೇಡಂ ಅವರು ಹಿತನುಡಿಗಳನ್ನಾಡಲಿದ್ದಾರೆ. ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅಧ್ಯಕ್ಷತೆ ವಹಿಸುವರು.

Contact Your\'s Advertisement; 9902492681

ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ, ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ, ಭಗವಂತ ಖೂಬಾ, ಶಾಸಕರುಗಳಾದ ಪ್ರಿಯಾಂಕ್ ಖರ್ಗೆ, ಡಾ.ಅಜಯ್ ಸಿಂಗ್, ಎಂ.ವೈ.ಪಾಟೀಲ್, ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಬಿ.ಮತ್ತಿಮೂಡ, ಕನೀಜ್ ಫಾತೀಮಾ, ಸುಭಾಷ ಗುತ್ತೇದಾರ, ಡಾ. ಅವಿನಾಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಇಕ್ಬಾಲ ಅಹ್ಮದ ಸರಡಗಿ, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ತಾಲೂಕು ಪಂಚಾಯತ ಅಧ್ಯಕ್ಷ ಶಿವರಾಜ ಸಜ್ಜನ ಮುಖ್ಯ ಅತಿಥಿಗಳಾಗಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ, ಸುರೇಶ ಡಿ.ಬಡಿಗೇರ ಅವರು ವಿಶೇಷ ಅಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಡಾ. ರಾಜಾ ಪಿ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಅವರು ಉಪಸ್ಥಿತರಿರುವರು.

ವಿಭಾಗದ ಒಟ್ಟು ೨೩೦ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ: ೨೦೧೯-೨೦ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಲಬುರಗಿ ವಿಭಾಗದ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ೧೧೪ ಹಾಗೂ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ೧೧೬ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೨೩೦ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಿ, ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ೨೫,೦೦೦ ರೂ., ತಾಲೂಕು ಮಟ್ಟದಲ್ಲಿ ಅತೀ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ ವಿದ್ಯಾರ್ಥಿಗಳಿಗೆ ೧೦,೦೦೦ ರೂ. ದ್ವಿತೀಯ ಸ್ಥಾನ ೯,೦೦೦ರೂ. ಹಾಗೂ ತೃತೀಯ ಸ್ಥಾನ ೮,೦೦೦ ರೂ. ಹಾಗು ಪ್ರಮಾಣಪತ್ರ ನೀಡಲಾಗುತ್ತದೆ.

ಅಂದು ಬೆಳಿಗ್ಗೆ ೮.೩೦ ಗಂಟೆಗೆ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ೯.೩೦ಕ್ಕೆ ಸುಗಮ ಸಂಗೀತ, ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here