ಶಹಾಪುರ : ತಾಲ್ಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಯುವ ಸೇನೆ ವತಿಯಿಂದ ಶಹಾಪುರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಶಹಾಪುರ ತಾಲ್ಲೂಕು ತಹಶೀಲ್ದಾರ್ ಮುಖಾಂತರ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯವರಿಗೆ ಮನವಿ ಪತ್ರ ಸಲ್ಲಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಂದಿರುವ ಅನುದಾನದಲ್ಲಿ ಅಕ್ರಮ ವಾಸನೆ ಕಂಡು ಬಂದಿದ್ದು ಕೂಡಲೇ ಸೂಕ್ತ ತನಿಖೆ ನಡೆಸಬೇಕೆಂದು ಈ ಮೂಲಕ ತಾಲೂಕಾಧ್ಯಕ್ಷ ಬೀಮಾಶಂಕರ ಕಟ್ಟಿಮನಿ ಆಗ್ರಹಿಸಿದರು.
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಯಲ್ಲೂ ಕೂಡ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು
ಇದಕ್ಕೆಲ್ಲ ಕಾರಣ ಕಾಲೇಜಿನ ಪ್ರಾಂಶುಪಾಲರೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.