ಕಲಬುರಗಿ: ಜಿಲ್ಲೆಯಲ್ಲಿಅಲ್ಪ ಪ್ರಮಾಣದಲ್ಲಿ ಎಲೆಕೋಸು ಬೆಳೆಯನ್ನು ರೈತರು ಬೆಳೆಯುತ್ತಿದ್ದು, ಚಳಿಗಾಲದಲ್ಲಿ ಚಳಿ ಪ್ರಮಾಣಕಡಿಮೆಯಾಗಿರುವುದರಿಂದ ಹಾಗೂ ಒಣಹವೆ ಸನ್ನಿವೇಶದಿಂದಕೂಡಿದ ಪರಿಸರದಲ್ಲಿ ಬೆಳೆಯ ಸೂಕ್ತ ನಿರ್ವಹಣೆಕೈಗೊಳ್ಳುವ ಮೂಲಕ ಉತ್ತಮ ಇಳುವರಿ ಪಡೆಯಬಹುದು ಎಂದು ಕೃಷಿ ವಿಜ್ಞಾನ ಕೇಂದ್ರ, ತಂಡವು ಸಲಹೆ ನೀಡಿದೆ.
ಆಳಂದ ತಾಲೂಕಿನ ನರೋಣಾ ಗ್ರಾಮದ ಪ್ರಗತಿಪರ ರೈತರಾದ ರೇವಣಸಿದ್ದ ಆನಂದರಾವ ಪಾಟೀಲ್ ರವರ ಹೊಲಕ್ಕೆ ಬೇಟಿ ನೀಡಿ ಉತ್ತಮ ಇಳುವರಿಗಾಗಿ ಭೂಮಿಗೆ ಎರೆಹುಳ ಗೊಬ್ಬರ ಬಳಸಿ ಹಾಗೂ ಕೀಟಗಳ ನಿರ್ವಹಣೆಗಾಗಿ ಪರಿಸರ ಸ್ನೇಹಿ ಸಸ್ಯ ಸಂರಕ್ಷಣೆ ಕ್ರಮಗಳನ್ನು ಪಾಲಿಸಲು ಸೂಚಿಸಿದರು.
ರೈತರು ಸಸಿ ಮಡಿ ಹಂತ ಹಾಗೂ ಮುಖ್ಯಕ್ಷೇತ್ರದಲ್ಲಿ ನಾಟಿ ಮಾಡುವ ಸಮಯದಲ್ಲಿ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೊಟ್ಯಾಷ್ ಹಾಗೂ ವಾರಕ್ಕೊಮ್ಮೆ ನೀರು ಹರಿಸಿದಲ್ಲಿ ಉತ್ಪಾದನಾ ಪ್ರಮಾಣ ಹೆಚ್ಚಿಸಬಹುದು. ತಂಡದಲ್ಲಿ ಕೃಷಿ ವಿಜ್ಞಾನಕೇಂದ್ರ, ಕಲಬುರಗಿಯ ವಿಜ್ಞಾನಿಗಳಾದ ಡಾ. ಯುಸುಫ್ ಅಲಿ, ಡಾ. ಜಹೀರ್ ಅಹೆಮದ್, ಡಾ. ಶ್ರೀನಿವಾಸ ಬಿ.ವಿ ಹಾಗೂ ನಾಗಿಂದ್ರ ಬಡದಾಳಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…