ಸುರಪುರ: ಇದೇ ತಿಂಗಳ ೧೯ನೇ ತಾರೀಖಿನಂದು ಬೆಳಿಗ್ಗೆ ತಾಲೂಕು ಆಡಳಿತ ದಿಂದ ಅದ್ಧೂರಿಯಾಗಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಗುವುದು ಎಂದು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಮಾತನಾಡಿದರು.
ನಗರದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಸರಕಾರದ ಆದೇಶದಂತೆ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಚರಣೆ ನಡೆಯಲಿದ್ದು ಕಾರ್ಯಕ್ರಮವನ್ನು ಶಾಸಕ ನರಸಿಂಹ ನಾಯಕ (ರಾಜುಗೌಡ) ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ಶಾರದಾ ಭೀಮಣ್ಣ ಬೇವಿನಾಳ,ಎಪಿಎಂಸಿ ಅಧ್ಯಕ್ಷರಾದ ನಿಂಗಣ್ಣ ಬಾದ್ಯಾಪುರ ಹಾಗು ಇತರೆ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಅಂದು ಬೆಳಿಗ್ಗೆ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಸರಕಾರಿ ಕಚೇರಿಗಳಲ್ಲಿ ಬೆಳಿಗ್ಗೆ ಶಿವಾಜಿ ಮಹಾರಾಜರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಿ ನಂತರ ತಾಲೂಕು ಆಡಳಿತದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ ಪಡಕೋಟೆ ಮಾತನಾಡಿ,ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಯಾವುದೆ ಜಾತಿ ಮತದ ಭೇದವಿಲ್ಲದೆ ಶಿವಾಜಿ ಮಹಾರಾಜರ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಬೇಕು.ಶಿವಾಜಿ ಮಹಾರಾಜರು ಒಬ್ಬ ಅಪ್ಪಟ ದೇಶಪ್ರೇಮಿಯಾಗಿದ್ದರು,ಅವರ ಜಯಂತಿಯಲ್ಲಿ ಪಾಲ್ಗೊಳ್ಳುವ ಮೂಲಕ ಅವರ ದೇಶಪ್ರೇಮವನ್ನು ಎಲ್ಲರು ಮೈಗೂಡಿಸಿಕೊಳ್ಳೋಣ ಎಂದರು.
ಸಭೆಯಲ್ಲಿ ಮುಖಂಡರಾದ ಗೋವಿಂದ ಮಾಳದಕರ್,ದೀಪಕ್ ಚವ್ಹಾಣ,ಹನುಮಂತಪ್ಪ ಪಡುಕೋಟೆ,ಬಸವರಾಜ ದೊರೆ,ಅಂಬ್ರೇಶ ಮರಾಠ ಜಾಲಿಬೆಂಚಿ,ಶಿವಲಿಂಗ ವಗ್ಗಾರ,ಶಿವಕುಮಾರ ಬಾಸೂತ್ಕರ್,ವಿಟೋಬಾ ಕಾಂಬ್ಳೆ,ಶಿವಾಜಿ ವಗ್ಗಾರ,ಪ್ರವೀಣ,ಮಲ್ಲು ತಳಕರ ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳಾದ ನಿಂಗಣ್ಣ ಪೂಜಾರಿ, ಜೆ.ಕೆ.ಪವಾರ್, ಲಾಲಸಾಬ್ ಪೀರಾಪುರ್, ಶಿವಪುತ್ರ ,ವಿಶ್ವನಾಥೆಂ.ವೈ,ಮಲ್ಲಪ್ಪ ಹಾವಿನ್,ರಮೇಶ,ರಂಗನಾಥ,ವಿಶ್ವನಾಥ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…