ಬಿಸಿ ಬಿಸಿ ಸುದ್ದಿ

‘ಸಮಕಾಲೀನ ಸಾಹಿತ್ಯ ಮತ್ತು ಸಿನೇಮಾ’ ಕುರಿತ ವಿಶೇಷ ಕಾರ್ಯಕ್ರಮ

ಕಲಬುರಗಿ: ಭಾಷೆಯ ಬಗ್ಗೆ ಯಾವುದೇ ತರಹದ ಮಡಿವಂತಿಕೆಯನ್ನು ಇಟ್ಟುಕೊಳ್ಳದೇ ಎಲ್ಲಾ ಭಾಷೆಯನ್ನೂ ಪ್ರೀತಿಸಿ, ಗೌರವಿಸಬೇಕು. ಆದರೆ, ಕನ್ನಡ ಭಾಷೆಯನ್ನು ಉಳಿಸಿ-ಬೆಳೆಸಬೇಕೆಂದು ಕನ್ನಡ ಚಲನಚಿತ್ರ ನಟ ಭರತ್ ಸಾಗರ ಅಭಿಪ್ರಾಯಪಟ್ಟರು.

ವಿಶ್ವಜ್ಯೋತಿ ಪ್ರತಿಷ್ಟಾನದ ವತಿಯಿಂದ ನಗರದ ಆಳಂದ ರಸ್ತೆಯಲ್ಲಿರುವ ಬಸವೇಶ್ವರ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ‘ಸಮಕಾಲೀನ ಸಾಹಿತ್ಯ ಮತ್ತು ಸಿನೇಮಾ’ ಕುರಿತ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾಷೆ ಸಂಪರ್ಕದ ಸೇತುವೆಯಾಗಿದ್ದು, ಕನ್ನಡಿಗರು ವ್ಯವಹಾರಕ್ಕಾಗಿ ಎಲ್ಲಾ ಭಾಷೆಗಳನ್ನು ಕಲಿಯಬೇಕು. ಆದರೆ ಮಾತೃಭಾಷೆಯಲ್ಲೇ ವ್ಯವಹರಿಸಬೇಕು. ಕನ್ನಡ ಪುಸ್ತಕಗಳನ್ನು ಓದಬೇಕು. ಕನ್ನಡ ಸಿನಿಮಾಗಳನ್ನು ವೀಕ್ಷಿಸುವ ಮೂಲಕ ಭಾಷೆ ಮತ್ತು ಕಲಾವಿದರನ್ನು ಬೆಳೆಸಬೇಕು ಎಂದು ಮಾರ್ಮಿಕವಾಗಿ ಮಾತನಾಡಿದರು.

ಪ್ರಸಿದ್ಧ ಕಥೆಗಾರ ಸಿದ್ಧರಾಮ ಹೊನ್ಕಲ್ ಮಾತನಾಡಿ, ಸಾಹಿತ್ಯ ಬರವಣಿಗೆಗೆ ಅಧ್ಯಯನ ಬಹಳ ಮುಖ್ಯ. ಕಥೆಯಿರಲಿ, ಕವನವಿರಲಿ ಸಾಹಿತ್ಯದ ಯಾವುದೇ ಪ್ರಕಾರವಿರಲಿ, ಅದಕ್ಕೊಂದು ಸಮರ್ಪಕವಾದ ಸಿದ್ಧತೆ ಬೇಕು. ಆ ಸಿದ್ಧತೆಗಾಗಿ ಇಂದಿನ ಯುವ ಜನತೆ ಉತ್ತಮ ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡಬೇಕೆಂದರು.

ಪ್ರತಿಷ್ಟಾನದ ಸಂಸ್ಥಾಪಕರೂ ಆದ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ಯಾವುದೇ ಸಿನಿಮಾದ ಯಶಸ್ಸಿಗೆ ಕಥೆ, ಕಲಾವಿದರ ಆಯ್ಕೆ ಮತ್ತು ನಿರ್ದೇಶನ ಮುಖ್ಯವಾಗುತ್ತದೆ. ಕನ್ನಡದಲ್ಲಿ ಅಪಾರ ಸಾಹಿತ್ಯ ಸಂಪತ್ತು ಇದೆ. ಉತ್ತಮ ಕಲಾವಿದರಿದ್ದಾರೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಕನ್ನಡ ಚಿತ್ರರಂಗ ಇನ್ನಷ್ಟು-ಮತ್ತಷ್ಟು ಬೆಳೆಯುತ್ತದೆ ಎಂದು ಹೇಳಿದರು.

‘ಸಿನಿಮಾ ಈಗ ಮನರಂಜನೆಗೆ ಮಾತ್ರ ಸೀಮಿತವಾಗಿದೆ. ಆದರೆ ಸಮಾಜ ತಿದ್ದುವ ಕೆಲಸವನ್ನು ಮಾಡುತ್ತಿಲ್ಲ. ಹಿಂದಿನ ದಿನಮಾನಗಳಲ್ಲಿ ಸಮಾಜದ ವಿಭಿನ್ನ ದೃಷ್ಟಿಕೋನವನ್ನು ಇಟ್ಟುಕೊಂಡು ಸಿನಿಮಾಗಳನ್ನು ಮಾಡಲಾಗುತ್ತಿತ್ತು. ಆ ಸಿನಿಮಾಗಳು ಸಮಾಜವನ್ನು ಸುಧಾರಿಸುವುದರೊಂದಿಗೆ ಉತ್ತಮ ಸಂದೇಶಗಳನ್ನು ಸಹ ಸಮಾಜಕ್ಕೆ ನೀಡುತ್ತಿದ್ದವು.’     – ವಿಜಯಕುಮಾರ ತೇಗಲತಿಪ್ಪಿ, ಸಾಂಸ್ಕೃತಿಕ ಸಂಘಟಕ

ಕಾಲೇಜಿನ ಪ್ರಿನ್ಸಿಪಾಲ್ ಡಾ.ಅಂಬಾರಾಯ ಹಾಗರಗಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಳಂದ ಎಸ್.ಆರ್.ಜಿ. ಫೌಂಡೇಷನ್ ಆಡಳಿತಾಧಿಕಾರಿ ರಾಘವೇಂದ್ರ ಚಿಂಚನಸೂರ, ಸಾಮಾಜಿಕ ಚಿಂತಕರಾದ ವಾಣಿಶ್ರೀ ಸಗರಕರ್, ಶುಭಾಂಗಿ ಪೊದ್ದಾರ, ಪ್ರೊ.ಮಹಾದೇವ ಬಡಾ, ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಶರಣ ಚಿಂತಕ ಶಿವಶರಣಪ್ಪ ಕುಸನೂರ, ನ್ಯಾಯವಾದಿ ಹಣಮಂತರಾಯ ಅಟ್ಟೂರ ವೇದಿಕೆ ಮೇಲಿದ್ದರು.

ಇದೇ ಸಂದರ್ಭದಲ್ಲಿ ಭರತ್ ಸಾಗರ ನಟಿಸಿರುವ ‘ಕಾಲವೇ ಮೋಸಗಾರ’ ಕನ್ನಡ ಚಲನಚಿತ್ರದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ನ್ಯಾಯವಾದಿ-ಗಾಯಕ ಹಣಮಂತರಾಯ ಅಟ್ಟೂರ ಅವರು ಹಾಡಿದ ‘ಏನ್ ಆಗ್ತಾದೋ… ಎಂತಾಗ್ತದೋ… ಈ ನಾಡಾ… ನೀ ನೋಡಾ… ಎಂಬ ಕಡಕೋಳ ಮಡಿವಾಳಪ್ಪ ನವರ ಗೀತೆ ನೆರೆದಿದ್ದ ಪ್ರೇಕ್ಷಕರ ಮನ ಗೆದ್ದಿತ್ತು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago