ಬಿಸಿ ಬಿಸಿ ಸುದ್ದಿ

ಗೋದುತಾಯಿ ಕಾಲೇಜಿನಲ್ಲಿ 18 ರಿಂದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಕಲಬುರಗಿ: ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಪರಮಪೂಜ್ಯರಾದ ಗೋದುತಾಯಿ ಅವ್ವಾ ಅವರ ೪೯ನೇ ಪುಣ್ಯಸ್ಮರಣೋತ್ಸವದ ನಿಮಿತ್ತ್ಯ ಮಹಾವಿದ್ಯಾಲಯದಲ್ಲಿ ಒಂದು ವಾರದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಎರಡು ದಿನದ ರಾಷ್ಟ್ರೀಯ ಸಮ್ಮೇಳನದೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದ್ದು ಸಮ್ಮೇಳನದ ಮೂಲ ಧ್ಯೇಯ ಮಹಿಳಾ ಸಬಲೀಕರಣ: ಸವಾಲುಗಳು ಮತ್ತು ಜವಾಬ್ದಾರಿಗಳು. ಹಿಂದಿನ ಮಹಿಳೆಯರಿಗಿದ್ದ ಸಮಸ್ಯೆಗಳು ಇಂದಿನ ಮಹಿಳೆಯರಿಗೆ ಸವಾಲುಗಳಾಗಿವೆ. ಅವರಂತೆ ಇಂದಿನವರು ಆ ಸಮಸ್ಯೆಯೊಳಗೆ ಸಿಕ್ಕು ನರಳುವದಕ್ಕಿಂತ ಅದನ್ನು ಎದುರಿಸಿ ಯಾವ ರೀತಿ ಸ್ವೀಕರಿಸಬೇಕು ಮತ್ತು ಜವಾಬ್ದಾರಿಯುತವಾಗಿ ಹೇಗೆ ನಿಭಾಯಿಸಬೇಕು ಎಂಬ ನಿಟ್ಟಿನಲ್ಲಿ ಈ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಚರ್ಚಿಸಲಾಗುವದು.

ಮಹಿಳಾ ಸಬಲೀಕರಣಕ್ಕೆ ಹೆಚ್ಚು ಮಹತ್ವ ನೀಡಿ ಅವಳ ವ್ಯಕ್ತಿತ್ವ ವಿಕಾಸನಗೊಳಿಸಿದ ಮಹಾದಾಸೋಹ ಪೀಠಾಧಿಪತಿಗಳು, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನಾಡಿನ ಅನೇಕ ವಿದ್ವಾಂಸರು ಭಾಗವಹಿಸಿ ತಮ್ಮ ಪ್ರಬಂಧಗಳನ್ನು ಮಂಡಿಸುವವರಿದ್ದಾರೆ.  ಜೊತೆಯಲ್ಲೆ ಕಲಬುರಗಿ ಸುತ್ತಮುತ್ತಲಿನ ಹಳ್ಳಿಗಳಲ್ಲಿರುವ ಕಾಲೇಜು ವಿದ್ಯಾರ್ಥಿನಿಯರಿಗೆ ಹಳ್ಳಿಯ ಆಟಗಳ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ವೃದ್ಧಾಶ್ರಮಕ್ಕೆ ಭೇಟಿಕೊಟ್ಟು ಅಲ್ಲಿಯ ಹಿರಿಯರಿಗೆ ಉಚಿತ ವೈದ್ಯಕೀಯ ತಪಾಸಣೆ ಮಾಡಿಸಲಾಗುವದು. ಅಲ್ಲದೆ ಅಂಧಮಕ್ಕಳ ಶಾಲೆಗೆ ಭೇಟಿ ನೀಡುವ ಕಾರ್ಯಕ್ರಮಗಳನ್ನು ಹಾಕಿಕೊಂಡು ಪೂಜ್ಯ ಗೋದುತಾಯಿ ಅವ್ವಾವರ ಪುಣ್ಯಸ್ಮರಣೆಯನ್ನು ಮಾಡಲಾಗುವದು.

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಇದೇ ೧೮ ಮತ್ತು ೧೯ ರಂದು ನಡೆಯಲಿದ್ದು, ಈ ಸಮ್ಮೇಳನದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್, ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಮಾತೋಶ್ರೀ ಶ್ರೀಮತಿ ದಾಕ್ಷಾಯಣಿ ಎಸ್.ಅಪ್ಪಾ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕಲಬುರಗಿಯ ಜೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಾ.ಆರ್.ರಾಗಾಪ್ರಿಯ ಐಎಎಸ್ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವೆ ಮತ್ತು ಸಾಹಿತಿಗಳಾದ ಡಾ.ಬಿ.ಟಿ.ಲಲಿತಾನಾಯಕ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ವಹಿಸಲಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago