ಬಿಸಿ ಬಿಸಿ ಸುದ್ದಿ

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ

ನಾಗಮಂಗಲ: ವಿಶ್ವದ ಎಲ್ಲಾ ವಿಜ್ಞಾನಿಗಳಿಂದ ಆದಂತಹ ನೂತನ ಆವಿಷ್ಕಾರಗಳು ಮನುಕುಲದ ಹೇಳಿಗಾಗಿಯೇ ಹೊರತು ವಿನಾಶಕ್ಕಲ್ಲ.ಆದ್ದರಿಂದ ವಿಜ್ಞಾನಿಗಳ ಸಂಶೋಧನೆ ಮಾನವ ಜನಾಂಗದ ಹೇಳಿಗೆಯನ್ನು ಉಂಟು ಮಾಡಲು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಶುಕ್ರವಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ,ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ,ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಇನ್ ಸ್ಪೈರ್ ಮಾನಕ್ ಅವಾರ್ಡ್ ಪಡೆದ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಂದು ರಾಷ್ಟ್ರದ ಪ್ರಗತಿಯನ್ನು ಅಳೆಯಲು ದೇಶದ ವಿಜ್ಞಾನ ಮತ್ತು ತಂತ್ರಜ್ಞಾನದ ಮಾಪನ ಮಾಡಿದರೆ ತಿಳಿಯಬಹುದು.ಇಂದಿನ ಮಕ್ಕಳಲ್ಲಿ ವಿಜ್ಞಾನದ ಬಗೆಗಿನ ಆಸಕ್ತಿ ಮತ್ತು ಪ್ರಗತಿ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಇಸ್ರೋ ಮಾಡಿರುವ ಸಾಧನೆ ಅಮೋಘವಾದದ್ದು,ಆದರೆ ನಾಸಾಗೆ ಹೋಲಿಸಿದರೆ ನಾವು ಹಿಂದುಳಿದಿದ್ದೇವೆ.ನಮ್ಮ ಇಂದಿನ ಸಾಧನೆಯು ಮುಂದಿನ ಸಾಧನೆಗೆ ಪ್ರೇರಣೆಯಾಗುತ್ತದೆ ಎಂದರು.

ಅಲ್ಲದೇ ಮಾನವ ಸಂಪನ್ಮೂಲವೂ ಸಹ ದೇಶದ ಅಭಿವೃದ್ಧಿಯಲ್ಲಿ ಪರಿಣಾಮಕಾರಿಯಾದದ್ದು.ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಸಾಧಿಸಲು ಸಾಧ್ಯ.ಮುಂದುವರಿದ ದೇಶಗಳು ನಮ್ಮ ದೇಶದ ಬುದ್ಧಿವಂತರನ್ನು ಸೆಳೆಯುವ ಕೆಲಸ ಮಾಡುವುದರಿಂದ ಪ್ರತಿಭಾ ಫಲಾಯನವಾಗುತ್ತಿದೆ.ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ ಸಾಧಕರನ್ನು ಆದರ್ಶವಾಗಿಟ್ಟುಕೊಳ್ಳಿ ವಿಜ್ಞಾನವು ಕುತೂಹಲದ ಪರಿಣಾಮ.ವಿಜ್ಞಾನದ ಆವಿಷ್ಕಾರಗಳು ಮನಸ್ಸು ಪ್ರಶಾಂತವಾಗಿದ್ದಾಗ ಮೂಡಿಬಂದ ಅಂಶಗಳು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಗೌಡ ಮಾತನಾಡಿ ಇಲ್ಲಿ ಭಾಗವಹಿಸಿರುವ ಮಕ್ಕಳು ಮುಂದಿನ ದಿನಗಳಲ್ಲಿ ನಾಡಿಗೆ,ದೇಶಕ್ಕೆ ಕೀರ್ತಿ ತರುವ ವಿಜ್ಞಾನಿಗಳಾಗಿ ಹೊಸ ಸಂಶೋಧನೆಗಳನ್ನು ದೇಶಕ್ಕಾಗಿ ಮೂಡಿಬರಲಿ ಎಂದರು.

ನಂತರ ಮಾತನಾಡಿದ ಡಿ.ಎಸ್.ಇ.ಆರ್.ಟಿ ನಿರ್ದೇಶಕ ಎಂ.ಆರ್.ಮಾರುತಿ ಮಕ್ಕಳಲ್ಲಿರುವ ಅನ್ವೇಷಣಾ ಮತ್ತು ಸೃಜನಶೀಲ ಮನೋಭಾವವನ್ನು ಹೊರ ತರುವ ಉದ್ದೇಶದಿಂದ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ಆದ್ದರಿಂದ ಮಕ್ಕಳನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಶಾಲೆ,ಸಮಾಜ ಮತ್ತು ಪೋಷಕರು ಮಾಡಬೇಕು ಎಂದರು.

ಕಾರ್ಯಕ್ರಮಕ್ಕೆ ರಾಜ್ಯದ 740 ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿತ್ತು.ಶುಕ್ರವಾರದ ವೇಳೆಗೆ ವಿವಿಧ ಜಿಲ್ಲೆಯ 708 ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ನೋಂದಣಿ ಮಾಡಿಕೊಂಡಿದ್ದರು. ಅಲ್ಲದೇ ವಿದ್ಯಾರ್ಥಿಗಳು,ಶಿಕ್ಷಕರು ಮತ್ತು ಪೋಷಕರು ಸೇರಿದಂತೆ 2000 ಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸೇರಿದ್ದರು.

ಕಣ್ಮನ ಸೆಳೆದ ವಿದ್ಯಾರ್ಥಿಗಳು ಮಾಡಿದ ಮಾದರಿಗಳು: ಕಾರ್ಯಕ್ರಮದಲ್ಲಿ ರಾಜ್ಯದ 708 ವಿದ್ಯಾರ್ಥಿಗಳು ಮಾಡಿದ ವಿಜ್ಞಾನ ಮಾದರಿಗಳು ನೆರೆದಿದ್ದ ಜನರನ್ನು ಆಶ್ಚರ್ಯಚಕಿತರಾಗುವಂತೆ ಮಾಡುವ ಜೊತೆಗೆ ಕಣ್ಮನ ಸೆಳೆದವು.ವಸ್ತು ಪ್ರದರ್ಶನದಲ್ಲಿ ವಿವಿಧ ಅನುಪಯುಕ್ತ ವಸ್ತುಗಳು ಸೇರಿದಂತೆ ಇತರ ವಸ್ತುಗಳನ್ನು ಬಳಸಿ ಮಾಡಲಾದ ಸರಳೀಕೃತ ಬಣ್ಣ ಹಚ್ಚುವ ಸಾಧನ,ಚಾಲಿ ಅಡಕೆಯ ಸಾವಯವ ಸೊಳ್ಳೆ ಬತ್ತಿ,ಪರಿಸರ ಸ್ನೇಹಿ ಶೌಚಾಲಯ, ವಾಹನ ದಟ್ಟಣೆ ಮತ್ತು ತ್ಯಾಜ್ಯ ನಿರ್ವಹಣೆ ,ಪರಿಸರ ಹವಾನಿಯಂತ್ರಕ,ಸೌರ ಹನಿ ನೀರಾವರಿ ಮುಂತಾದ ಮಾದರಿಗಳು ಪ್ರಮುಖ ಆಕರ್ಷಣೆಯಾಗಿದ್ದವು.

ನಂತರ ಮಾತನಾಡಿದ ಡಿ.ಎಸ್.ಇ.ಆರ್.ಟಿ ನಿರ್ದೇಶಕ ಎಂ.ಆರ್.ಮಾರುತಿ ಮಕ್ಕಳಲ್ಲಿರುವ ಅನ್ವೇಷಣಾ ಮತ್ತು ಸೃಜನಶೀಲ ಮನೋಭಾವವನ್ನು ಹೊರ ತರುವ ಉದ್ದೇಶದಿಂದ ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ಆದ್ದರಿಂದ ಮಕ್ಕಳನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಶಾಲೆ,ಸಮಾಜ ಮತ್ತು ಪೋಷಕರು ಮಾಡಬೇಕು ಎಂದರು.ಇಲಾಖೆ ಉಪನಿರ್ದೇಶಕ ಆರ್.ರಘುನಂದನ್,ಡಯಟ್ ಪ್ರಾಂಶುಪಾಲ ಎಂ.ಶಿವಮಾದಪ್ಪ ಮತ್ತು ಬಿಇಒ ಜಗದೀಶ್ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago