ಕಲಬುರಗಿ: ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಕೆಳಕಂಡ ತಾಲೂಕುಗಳಿಗೆ ಸಂಬಂಧಿಸಿದಂತೆ ಇದೇ ಫೆಬ್ರವರಿ 19, 20, 28, 29 ರಂದು ಆಯಾ ತಾಲೂಕುಗಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವಿನಾಯಕ ಅವರು ಫೆಬ್ರವರಿ ೧೯ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಶಹಾಬಾದ ಪ್ರವಾಸಿ ಮಂದಿರದಲ್ಲಿ ಹಾಗೂ ಫೆಬ್ರವರಿ ೨೦ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಯಡ್ರಾಮಿ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಎನ್.ಎಂ. ಓಲೇಕಾರ ಅವರು ಫೆಬ್ರವರಿ ೨೮ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಹಾಗೂ ಫೆಬ್ರವರಿ ೨೯ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಕಮಲಾಪುರ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.
ಆಯಾ ತಾಲೂಕುಗಳಿಗೆ ಸಂಬಂಧಪಟ್ಟ ಸಾರ್ವಜನಿಕರು ಮೇಲ್ಕಂಡ ದಿನದಂದು ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ ಕಂಪೌಂಡ, ಕಲಬುರಗಿ-೫೮೫೧೦೨ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ. 08472-263645, 263745ಗಳಿಗೆ ಸಂಪರ್ಕಿಸಲು ಕೋರಲಾಗಿದೆ.