ಬಿಸಿ ಬಿಸಿ ಸುದ್ದಿ

ಭೀಕರ ಅಪಘಾತ: ಓರ್ವ ಗರ್ಭಿಣಿ ಮಹಿಳೆ ಸಾವು, 8 ಗರ್ಭಿಣಿಯರಿಗೆ ಗಂಭೀರ ಗಾಯ

ಕಲಬುರಗಿ: ಇಲ್ಲಿನ ಔರಾದ್ ಹತ್ತಿರ ಗರ್ಭಿಣಿ ಮಹಿಳೆಯರು ತೆರುತ್ತಿದ್ದ, ಆಟೋವೊಂದು ಪಲ್ಟಿಯಾಗಿ ಓರ್ವ ಗರ್ಭಿಣಿ ಮಹಿಳೆ ಮೃತಪಟ್ಟು 8 ಗರ್ಭಿಣಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಪ್ರಿಯಾಂಕ (25) ಮೃತ ಗರ್ಭಿಣಿ ಎಂದು ಗುರುತಿಸಲಾಗಿದ್ದು, ಭೂಸಣಗಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಚಿಕಿತ್ಸೆ ಫಲಕಾರಿಯಾಗದೇ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡ ಉಳಿದ 8 ಮಹಿಳೆಯರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಐಸಿಯು ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸಂಭವಿಸಿದ ವಾಹನದಲ್ಲಿ ಆಶಾ ಕಾರ್ಯಕರ್ತೆಯರು ಸೇರಿ ಒಟ್ಟು 12 ಜನರಿದ್ದರೆಂದು ತಿಳಿದು ಬಂದಿದ್ದು, ಭೂಸಣಗಿ ಹಾಗೂ ಸುತ್ತಲಿನ ಗ್ರಾಮಗಳ ಒಟ್ಟು 9 ಜನ ಗರ್ಭಿಣಿಯರನ್ನು ವಾಹನದಲ್ಲಿ ತಿಂಗಳ ಚೆಕಪ್​​ಗಾಗಿ ಔರಾದ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆತಂದು, ಬಳಿಕ ವಾಪಸ್ ಗ್ರಾಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.

ಆಟೋ ಎದುರು ಆಕಳು ಕರು ಬಂದಿತ್ತು, ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಟೋ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗರ್ಭಿಣಿಯರು ಗಾಯಗೊಂಡು ನರಳುವಾಗ ಅದೇ ಮಾರ್ಗವಾಗಿ ತೆರಳುತ್ತಿದ್ದ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರ ಪತ್ನಿ ಜಯಶ್ರೀ ಮತ್ತಿಮೂಡ್ ಅವರು ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ಕರೆತಂದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

2 mins ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

7 mins ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

12 mins ago

ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…

18 mins ago

ಮಹಿಳೆಯರ ಘನತೆ ಹಾಗೂ ಮಾನವ ಮೌಲ್ಯ ಉಳಿಸಿ ಪುಸ್ತಕ ಬಿಡುಗಡೆ

ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…

22 mins ago

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

27 mins ago