ಬಿಸಿ ಬಿಸಿ ಸುದ್ದಿ

ಶರಣಬಸವ ವಿವಿಯ ಪ್ರಥಮ ಘಟಿಕೋತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಪ್ರಥಮ ವರ್ಷದ ಘಟಿಕೋತ್ಸವದಲ್ಲಿ ಭಾಗವಹಿಸುವದಕ್ಕಾಗಿ ಕೋರಿದ ಆಹ್ವಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸ್ವೀಕರಿಸಿದ್ದಾರೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಶ್ರೀ ಬಸವರಾಜ ದೇಶಮುಖ ಅವರು ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆಯವರೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಘಟಿಕೋತ್ಸವಕ್ಕೆ ವೈಯಕ್ತಿಕವಾಗಿ ಆಹ್ವಾನಿಸಿರುವುದಾಗಿ ಬುಧವಾರ ತಿಳಿಸಿದರು.

ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಏಪ್ರಿಲ್‌ನಲ್ಲಿ ವಿಧಾನಸಭೆಯ ಅಧಿವೇಶನದ ನಂತರ ಸಮ್ಮೇಳನದ ದಿನಾಂಕ ನಿಗದಿಪಡಿಸಬೇಕೆಂಬ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಕಚೇರಿಯೊಂದಿಗೆ ಸಮಾಲೋಚಿಸಿ ಘಟಿಕೋತ್ಸವದ ದಿನಾಂಕ ನಿಗದಿಪಡಿಸಲಾಗುವುದು, ವಿಶ್ವವಿದ್ಯಾಲಯದ ಸಂದರ್ಶಕ ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥನಾರಾಯಣ ಅವರಿಗೂ ಸಹ ಆಹ್ವಾನ ನೀಡಲಾಗಿದೆ ಎಂದು ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಹೇಳಿದರು.

ಘಟಿಕೋತ್ಸವದಲ್ಲಿ ೩೩೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗಿದೆ. ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪಾ ಅವರ ಬಯಕೆಯಂತೆ ಮಹಾತ್ಮ ಗಾಂಧಿಜೀಯವರು ನಮ್ಮ ಸಂಸ್ಥೆಗೆ ಭೇಟಿ ನೀಡಿದ ಸ್ಮರಣಾರ್ಥವಾಗಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ತೊಡುವ ಉಡುಪಿಗೆ ಎಲ್ಲರ ಹೃದಯ ಸ್ಪರ್ಶಿಯಾದ ಖಾದಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ವಿವಿಕುಲಸಚಿವರು ತಿಳಿಸಿದರು. ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರಿಗೆ (ಹುಡುಗಿಯರಿಗೆ) ಸ್ನಾತಕೋತ್ತರ ಪದವಿಧರರಿಗೆ ವಿಶ್ವವಿದ್ಯಾಲಯದ ಹೆಸರು ಮತ್ತು ಲೋಗೊ ಹೊಂದಿದ್ದ ಬಿಳಿ ಸೀರೆ ಮತ್ತು ಶಾಲು ಹಾಗೂ ವಿದ್ಯಾರ್ಥಿಗಳಿಗೆ (ಹುಡುಗರಿಗೆ) ಸ್ನಾತಕೋತ್ತರ ಪದವಿಧರರಿಗೆ ವಿಶ್ವವಿದ್ಯಾಲಯದ ಹೆಸರು ಮತ್ತು ಲೋಗೊ ಹೊಂದಿದ್ದ ಬಿಳಿ ಕುರ್ತಾ ಮತ್ತು ಪ್ಯಾಂಟು ಹಾಗೂ ಶಾಲು ಉಡುಪನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಪೂಜ್ಯ ಅಪ್ಪಾಜೀಯವರ ಬಯಕೆಯಂತೆ ಪ್ರಮಾಣಪತ್ರವನ್ನು ಪಡೆಯುವ ವಿದ್ಯಾರ್ಥಿಗಳಿಗೆ ಈ ಪ್ರದೇಶವನ್ನು ಗುರುತಿಸುವ ರುಮಾಲು ಒದಗಿಸಲಾಗುತ್ತದೆ. ಬ್ರಿಟಿಷರಿಂದ ಆಯ್ಕೆಗೊಂಡಿರುವ ಈ ರುಮಾಲು ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಧರಿಸುತ್ತಾರೆ. ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಫೆ.೨೮ರಂದು ’ರಾಷ್ಟ್ರೀಯ ವಿಜ್ಞಾನ ದಿನಚಾರಣೆ’ಯಂದು ವಿಜ್ಞಾನ ದಿನಚಾರಣೆಯನ್ನು ಆಯೋಜಿಸಲಾಗಿದೆ. ’ವಿಜ್ಞಾನದಲ್ಲಿ ಮಹಿಳೆಯರು’ ಎಂಬ ವಿಷಯದ ಕುರಿತಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಯವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.

ವಿಶ್ವವಿದ್ಯಾಲಯದ ಪ್ರಧ್ಯಾಪಕ ಪ್ರೊ.ಸಾಬಿಹಾ ಭೂಮಿಗೌಡ ಮತ್ತು ಎಚ್.ಎ.ಎಲ್‌ನ ಮಾಜಿ ಪ್ರಧಾನ ವ್ಯವಸ್ಥಾಪಕ ಎಂ.ಎಸ್. ನೇಮಿಚಂದ್ರ ವಿಜ್ಞಾನ ದಿನಚಾರಣೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ದಿನದ ಅಂಗವಾಗಿ ವಿಜ್ಞಾನ ಪ್ರದರ್ಶನ ಆಯೋಜಿಸಲಾಗಿದೆ ಎಂದು ಬಸವರಾಜ ದೇಶಮುಖ ತಿಳಿಸಿದ್ದಾರೆ.

ಧಾರವಾಡ ಮೂಲದ ಪಂಡಿತ ರಾಜಗುರು ಅಂತರಾಷ್ಟ್ರೀಯ ಸಂಗೀತ ಟ್ರಸ್ಟ್‌ನ ಸಹಯೋಗದೊಂದಿಗೆ ವಿಶ್ವವಿದ್ಯಾಲಯದ ಆವರಣದಲ್ಲಿ ’ಸಂಗೀತ ಸಂಜೆ’ ಆಯೋಜಿಸಲಾಗುತ್ತದೆ. ದೇಶದ ವಿವಿಧ ಭಾಗದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಕುಲಸಚಿವ ಡಾ. ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

3 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

14 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

14 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

16 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

16 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

16 hours ago