ಸುರಪುರ: ಜನನಿ ಕಾಲೇಜಿಗೆ ದಕ್ಷಿಣ ಭಾರತ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿ

0
104

ಸುರಪುರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ಭಾರತ ವಲಯದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಭಾವೈಕ್ಯತಾ ಮೆರವಣಿಗೆಯಲ್ಲಿ ಪಾಲ್ಗೊಂಡ ನಗರದ ಜನನಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯಕ್ಕೆ ದ್ವಿತೀಯ ಸ್ಥಾನವನ್ನು ತಂದುಕೊಟ್ಟಿದ್ದಾರೆ.

ವಿದ್ಯಾರ್ಥಿನಿಯರಾದ ಸಹನಾ ರವೀಂದ್ರ ಅಸಗಳ್ಳಿ, ಐಶ್ವರ್ಯ ಸತ್ಯನಾರಾಯಣ, ಪೃಥ್ವಿ ಶಿವಶರಣಪ್ಪ, ಹುಲಗಮ್ಮ ಶೇಖರ್, ಬೋರಮ್ಮ ಶಿವಣ್ಣ ಎನ್ನುವ ವಿದ್ಯಾರ್ಥಿನಿಯರು ಕಾರ್ಯಕ್ರಮಾಧಿಕಾರಿ ಡಾ.ಮಲ್ಲಿಕಾರ್ಜುನ ಕಮತಗಿಯವರ ಮಾರ್ಗದರ್ಶನದಲ್ಲಿ ಪಾಲ್ಗೊಂಡು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Contact Your\'s Advertisement; 9902492681

ವಿದ್ಯಾರ್ಥಿನಿಯರ ಈ ಸಾಧನೆಗೆ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಬಿಹಾ ಭೂಮಿಗೌಡ, ಕುಲಸಚಿವರಾದ ಪ್ರೊ.ಆರ್.ಸುನಂದಮ್ಮ, ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಪ್ರೊ.ಬಿ.ಎಲ್. ಲಕ್ಕಣ್ಣನವರ ಹಾಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯರಿಗೆ ಅಭಿನಂದಿಸಿದ್ದಾರೆ.

ರಾಷ್ಟ್ರೀಯ ವಲಯ ಮಟ್ಟದ ಈ ಶಿಬಿರದಲ್ಲಿ ಮಹಾರಾಷ್ಟ್ರ, ಕೇರಳಾ, ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ ಮತ್ತು ಕರ್ನಾಟಕದ ಒಟ್ಟು ೨೨ ವಿಶ್ವವಿದ್ಯಾಲಯಗಳು ಭಾಗವಹಿಸಿದ್ದವು. ಪ್ರಥಮ ಬಹುಮಾನ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾಲಯ ಪಡೆದುಕೊಂಡಿತು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here