ಕಲಬುರಗಿ: ಮಹಾ ಶಿವರಾತ್ರಿ ನಿಮಿತ್ತ ನಗರದ ಪ್ರಮುಖ ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಹೊರ ವಲಯದ ರಾಮತೀರ್ಥದ ಶಿವಮಂದಿರದಲ್ಲಿ ವಿಶೇಷವಾಗಿ ಅಲಂಕರಿಸಿದ ಶಿವಲಿಂಗ, ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯ ದವರು ಗೀತಾ ನಗರದಲ್ಲಿ ಪ್ರತಿಷ್ಠಾಪಿಸಿದ ರುದ್ರಾಕ್ಷಿ ಶಿವಲಿಂಗಗಳು ಅತ್ಯಂತ ಆಕರ್ಷಕ ಗೊಂಡವು.
ಅದರಂತೆ ಗೋದುತಾಯಿ ನಗರ, ವೆಂಕಟೇಶ್ವರ ನಗರ, ಮಾರ್ಕೆಟ್ ಪ್ರದೇಶ, ಓಕಳಿ ಕ್ಯಾಂಪ್, ಜಯನಗರ ಮುಂತಾದ ಕಡೆಗಳಲ್ಲಿ ಶಿವನ ಮೂರ್ತಿಗೆ ವಿಶೇಷ ಶೃಂಗಾರ ಮಾಡಿದ್ದರು.
ನಗರದ ವಿವಿಧ ಬಡಾವಣೆಯ ಜನರು ನಸುಕಿನಿಂದಲೇ ಈ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶಿವರಾತ್ರಿ ನಿಮಿತ್ತ ನಗರದ ಎಲ್ಲ ದೇವಸ್ಥಾನಗಳಲ್ಲಿ ಶಿವನನ್ನು ಸ್ಥುತಿಸುವ ಹಾಡುಗಳು ಕೇಳಿ ಬರುತ್ತಿದ್ದವು. ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆದರು.
ಪ್ರಮುಖ ಮಾರುಕಟ್ಟೆಗಳಲ್ಲಿ ಹೂ, ಹಣ್ಣು ಕಾಯಿ, ಕರ್ಪೂರದ ಮಾರಾಟ ಬರ್ಜರಿಯಾಗಿ ನಡೆದಿತ್ತು. ವ್ಯಾಪಾರ, ವಹಿವಾಟು ಜೋರಾಗಿತ್ತು. ಶಿವರಾತ್ರಿ ನಿಮಿತ್ತ ರಸ್ತೆ ಸಂಚಾರ ದಟ್ಟಣೆ ಕೂಡ ಕಡಿಮೆಯಾಗಿತ್ತು. ಬಹುತೇಕ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರವೇ ಆಗಿರಲಿಲ್ಲ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…